ರಾ.ಶಿರೂರು ಅವರಿಗೆ ಸರಸ್ವತಿ ಸಾಧಕ ಸಿರಿ -2025 ರಾಷ್ಟ್ರ ಪ್ರಶಸ್ತಿ ಪ್ರದಾನ: ಸಾಲಿಗ್ರಾಮ ಗಣೇಶ್ ಶೆಣೈ

0
190

ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ. ರಾಮಕೃಷ್ಣ ಶಿರೂರು ಇವರಿಗೆ ಸರಸ್ವತಿ ಸಾಧಕ ಸಿರಿ ಪ್ರಶಸ್ತಿ – 2025ರ ರಾಷ್ಟ್ರ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. 2025 ಮಾರ್ಚ್ 2 ರಂದು ದಾವಣಗೆರೆಯ ರೋಟರಿ ಬಾಲ ಭವನದಲ್ಲಿ ನಡೆಯುವ ಸಾಹಿತ್ಯ ಸಮಾವೇಶದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು ಎಂದು ಕಲಾ ಕುಂಚ ದಾವಣಗೆರೆ ಮತ್ತು ಸಾಲಿಗ್ರಾಮ ಸರಸ್ವತಿ ವಾಸಪ್ಪ ಶೆಣೈ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀ ಸಾಲಿಗ್ರಾಮ ಗಣೇಶ್ ಶೆಣೈ ಅವರು ಪತ್ರಿಕೆಗೆ ತಿಳಿಸಿರುತ್ತಾರೆ.

ಎಂ. ಎ. ಬಿ. ಎಡ್. ಪದವೀಧರರಾದ ಡಾ.ರಾಮಕೃಷ್ಣ ಶಿರೂರು ಹಿಂದಿ ಭಾಷೆಯಲ್ಲಿ ರಾಜಭಾಷಾ ವಿದ್ವಾನ್ ಪದವಿಯನ್ನು ಪಡೆದಿರುತ್ತಾರೆ. ಇವರು ಮೂಲತ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಮೇಲ್ಪಂಗ್ತಿಯ ಶಾನುಭೋಗರ ಮನೆತನಕ್ಕೆ ಸೇರಿದ ಶ್ರೀ ಭವಾನಿ ಶಂಕರ ಶಾನುಭೋಗ ಮತ್ತು ಶ್ರೀಮತಿ ಸರೋಜಿನಿ ಶಾನುಭೋಗ ಅವರ ಪುತ್ರ.
1994ರಲ್ಲಿ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಶ್ರೀಮಂಗಲ ಪದವಿ ಪೂರ್ವ ಕಾಲೇಜಿನಲ್ಲಿ ಒಂದು ವರ್ಷ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿ,
19 95 ರಿಂದ ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯಲ್ಲಿ ಕನ್ನಡ ಆಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಾ ಬಂದಿರುವ ಇವರು ಮೂಡುಬಿದಿರೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಸಾಹಿತ್ಯ, ಸಂಗೀತ, ಸಾಂಸ್ಕೃತಿಕ ಮತ್ತು ಶಿಕ್ಷಕ ಸಂಘಟನಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡ
ಇವರಿಂದ ಮೂಡುಬಿದಿರೆಯಲ್ಲಿ ಇನ್ನಷ್ಟು ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ಮುಂದುವರಿಯಲಿ ಎಂದು ಹಾರೈಸಿ ಡಾ.ರಾಮಕೃಷ್ಣ ಶಿರೂರು ಅವರಿಗೆ ಅಭಿನಂದನೆ ಸಲ್ಲಿಸಿರುತ್ತಾರೆ.

LEAVE A REPLY

Please enter your comment!
Please enter your name here