ಹಾವೇರಿ: ಡ್ರಾಪ್ ಕೊಡುವ ನೆಪದಲ್ಲಿ ಮಹಿಳೆಯೊಬ್ಬರ ಮೇಲೆ ಅನ್ಯಕೋಮಿನ ಯುವಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದೆ. ರಟ್ಟಿಹಳ್ಳಿ ತಾಲೂಕಿನ ಕೆಂಚಾಯಿಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಸಂತೆಗೆ ಹೋಗಿ ಮಾಸೂರಿನಿಂದ ಮಹಿಳೆ ಸ್ವಗ್ರಾಮಕ್ಕೆ ತೆರಳುತ್ತಿದ್ದಳು. ಈ ವೇಳೆ ಶಾಹಿದುಲ್ಲಾ ಅಂಗರಗಟ್ಟಿ ಎಂಬಾತ ಡ್ರಾಪ್ ಕೊಡುವ ನೆಪದಲ್ಲಿ ಬೈಕ್ ಹತ್ತಿಸಿಕೊಂಡು ಊರಿನ ಹೊರಗೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಅಕ್ಕಪಕ್ಕದ ಜಮೀನಿನಲ್ಲಿದ್ದ ಜನರು ತನ್ನನ್ನು ರಕ್ಷಿಸಿದ್ದಾರೆ ಎಂದು ಮಹಿಳೆ ತಿಳಿಸಿದ್ದಾಳೆ.
ರಟ್ಟಿಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರು ದಾಖಲಾಗುತ್ತಿದ್ದಂತೆ ಆರೋಪಿ ತಲೆ ಮರೆಸಿಕೊಂಡಿದ್ದಾನೆ. ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.