ಬ್ರಹ್ಮಾವರ: 9ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ ಆರೋಪಿಯನ್ನು ಬಂಧಿಸಲಾಗಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟ ಬನ್ನಾಡಿಯ ಆರೋಪಿಯನ್ನು ಬಂಧಿಸಲಾಗಿದೆ. ಸ್ಥಳೀಯ ನಿವಾಸಿ ಹರೀಶ್ ಪೂಜಾರಿ ಎಂಬಾತ ತನ್ನ ಸಂಬಂಧಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ, ಆಕೆ ಗರ್ಭಿಣಿಯಾಗಲು ಕಾರಣವಾಗಿದ್ದ. ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ದೂರು ದಾಖಲಾಗಿದೆ.
ಗ್ರಾನೈಟ್ ಕೆಲಸ ಮಾಡಿಕೊಂಡಿದ್ದ ಆರೋಪಿ, 9ನೇ ತರಗತಿಯ ಸಂತ್ರಸ್ತ ಬಾಲಕಿಯ ಸಂಬಂಧಿಯಾಗಿದ್ದ. ಜು. 28ರಂದು ಉಡುಪಿಯಲ್ಲಿರುವ ಬಾಲಕಿಯ ಮನೆಗೆ ಬಂದು ಮನೆಯಲ್ಲಿ ಯಾರು ಇಲ್ಲದ ಸಂದರ್ಭ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಆಕೆಯ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದ ಕಾರಣ ವಿಚಾರಿಸಿದಾಗ ವಿಷಯ ಗೊತ್ತಾಗಿದೆ. ಉಡುಪಿ ಮಹಿಳಾ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.