ತಿರುವನಂತಪುರ: ಬಾಲಕಿ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದ ಯುವಕನಿಗೆ ಮಲಪ್ಪುರಂ ಜಿಲ್ಲೆಯ ಮಂಜೇರಿ ಪೊ ನ್ಯಾಯಾಲಯವು 87 ವರ್ಷಗಳ ಜೈಲು ಶಿಕ್ಷೆ ಹಾಗೂ 4.6 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಮಂಜೇರಿಯ ಉನಾಯಿಸ್ (29) ಶಿಕ್ಷೆಗೊಳಗಾದ ಅಪರಾಧಿಯಾಗಿದ್ದಾನೆ. 2020ರಿಂದ 2022ರ ಅವಧಿಯಲ್ಲಿ ಉನಾಯಿಸ್ ಸಂತ್ರಸ್ತೆಯ ಮನೆಗೆ ನುಗ್ಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ.
ವಿಷಯ ಬಾಯಿಬಿಟ್ಟರೆ ಬಾಲಕಿಯ ಖಾಸಗಿ ಫೋಟೋಗಳನ್ನು ಆನ್‌ಲೈನ್‌ನಲ್ಲಿ ಅಪ್ ಲೋಡ್ ಮಾಡುವ ಬೆದರಿಕೆ ಹಾಕಿದ್ದಾನೆಂದು ಆರೋಪಿಸಲಾಗಿತ್ತು. ಈ ಬಗ್ಆಗೆ ವಿಚಾರಣೆ ನಡೆಸಿದ ನ್ಯಾಯಾಲಯವು ಅಪರಾಧಿಗೆ ಪೊಕ್ಕೊ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಅನ್ವಯ ಈ ಶಿಕ್ಷೆ ವಿಧಿಸಿದೆ ಎಂದು ತಿಳಿದು ಬಂದಿದೆ.