Wednesday, July 24, 2024
Homeಅಪರಾಧದಲಿತ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಇಸ್ಲಾಂಗೆ ಮತಾಂತರವಾಗುವಂತೆ ಬಲವಂತ ಪಡಿಸಿದ ಆರೋಪಿಯ ಬಂಧನ

ದಲಿತ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಇಸ್ಲಾಂಗೆ ಮತಾಂತರವಾಗುವಂತೆ ಬಲವಂತ ಪಡಿಸಿದ ಆರೋಪಿಯ ಬಂಧನ

ಗೊಂಡ: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ ಮತ್ತು ಇಸ್ಲಾಂಗೆ ಮತಾಂತರವಾಗುವಂತೆ ಬಲವಂತಪಡಿಸಿದ ಬಗ್ಗೆ 25ರ ಹರೆಯದ ದಲಿತ ಯುವತಿಯೊಬ್ಬಳು ದೂರು ನೀಡಿದ್ದಾಳೆ. ಈ ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಗೊಂಡ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದೆ.
ಮದುವೆಯಾಗುವುದಾಗಿ ನಂಬಿಸಿ ತಾಜ್‌ ಮೊಹಮ್ಮದ್‌ ಎಂಬಾತ ತನ್ನನ್ನು ಅತ್ಯಾಚಾರ ಮಾಡಿದ್ದಾನೆ ಮತ್ತು ಇಸ್ಲಾಂಗೆ ಮತಾಂತರವಾಗುವಂತೆ ಬಲವಂತಪಡಿಸಿದ್ದಾನೆ ಎಂದು ಸಂತ್ರಸ್ತೆ ತನ್ನ ದೂರಲ್ಲಿ ಆರೋಪಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್‌ ಅಧಿಕಾರಿ ಮನೋಜ್‌ ಕುಮಾರ್‌ ರಾವತ್‌ ಹೇಳಿದ್ದಾರೆ.
ಕಳೆದ ವರ್ಷ ಆರೋಪಿಯು ಅತ್ಯಾಚಾರ ಮಾಡಿದ್ದಾನೆ. ಯಾರಲ್ಲಾದರೂ ತಿಳಿಸಿದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಆತ ಬೆದರಿಸಿದ್ದ. ಕೆಲವು ದಿನಗಳ ಹಿಂದೆ ಆತ ಜಾತಿ ನಿಂದನೆಯನ್ನೂ ಮಾಡಿದ್ದ ಎಂದು ತನ್ನ ದೂರಿನಲ್ಲಿ ಯುವತಿ ಆಪಾದಿಸಿದ್ದಾರೆ. ಹೀಗಾಗಿ ತಾಜ್‌ ಮೊಹಮ್ಮದ್‌ ವಿರುದ್ಧ ಅತ್ಯಾಚಾರ (376) ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಮತ್ತು ಉತ್ತರ ಪ್ರದೇಶ ಮತಾಂತರ ವಿರೋಧಿ ಕಾನೂನಿನಡಿ ಪ್ರಕರಣ ದಾಖಲಾಗಿದೆ.


ಆರೋಪಿಯನ್ನು ಬಂಧಿಸಿದ್ದೇವೆ ಮತ್ತು ತನಿಖೆ ಆರಂಭಿಸಿದ್ದೇವೆ ಎಂದು ಅಧಿಕಾರಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular