ವಿಜಯಪುರ: ಗೃಹಿಣಿಯೊಬ್ಬರಿಗೆ ಜೀವಬೆದರಿಕೆಯೊಡ್ಡಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ, ಚಿತ್ರೀಕರಣ ನಡೆಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಬಳಿಕ ಸಂತ್ರಸ್ತೆ ತನ್ನ ಮಗನೊಂದಿಗೆ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.
ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನಲ್ಲಿ ಕಳೆದ ಫೆಬ್ರವರಿಯಲ್ಲೇ ಘಟನೆ ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ. 32 ವರ್ಷದ ಗೃಹಿಣಿಯನ್ನು ಅದೇ ಗ್ರಾಮದ ಇಬ್ಬರು ಆರೋಪಿಗಳಲ್ಲಿ ಒಬ್ಬನ ಮನೆಗೆ ಕರೆದೊಯ್ದು ಜೀವಬೆದರಿಕೆಯೊಡ್ಡಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ಆಕಾಶ ಹಡಗಲಿ ಮತ್ತು ಅಭಿಷೇಕ ಸಜ್ಜನ ಎಂಬವರು ಆರೋಪಿಗಳು. ಅತ್ಯಾಚಾರ ಘಟನೆಯನ್ನು ಚಿತ್ರೀಕರಿಸಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಹರಿಬಿಟ್ಟಿದ್ದಾರೆ ಎನ್ನಲಾಗಿದೆ.
ಈ ವಿಡಿಯೋ ಬೇರೆ ಊರಿನಲ್ಲಿರುವ ಮಹಿಳೆಯ ಸಹೋದರನ ಮೊಬೈಲ್ ಗೂ ಸಿಕ್ಕಿದೆ. ಸಹೋದರ ವಿಡಿಯೋವನ್ನು ಸಂತ್ರಸ್ತೆಯ ತಾಯಿಗೆ ತೋರಿಸಿದ್ದು, ಈ ವೇಳೆ ಘಟನೆ ಬೆಳಕಿಗೆ ಬಂದಿದೆ.
ವಿಷಯ ಮನೆಯವರಿಗೆ ಗೊತ್ತಾಗಿರುವುದು ತಿಳಿದ ಬಳಿಕ ಮಹಿಳೆ ತನ್ನ ಆರು ವರ್ಷದ ಮಗನೊಂದಿಗೆ ನಾಪತ್ತೆಯಾಗಿದ್ದಾಳೆ. ಈ ಬಗ್ಗೆ ಸಂತ್ರಸ್ತೆಯ ತಾಯಿ ದೂರು ನೀಡಿದ್ದಾರೆ. ದೂರಿನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.