ಕಾಪು: ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಆಕೆಯನ್ನು ಗರ್ಭಿಣಿಯನ್ನಾಗಿಸಿ ಪರಾರಿಯಾಗಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ತಿಂಗಳಿನಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಳ್ಳಾರಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ವಿಜಯನಗರದ ಹಟ್ಟಿ ಚಿರತಗುಂದ ಮೂಲದ ಚೇತನ್ ಅಲಿಯಾಸ್ ತಿಪ್ಪೇಶ್ ಬಂಧಿತ ಆರೋಪಿ. ಶಂಕರಪುರದಲ್ಲಿ ಬಾಡಿಗೆ ಮನೆಯಲ್ಲಿದ್ದ ಬಾಲಕಿಯನ್ನು ಈತ ಅತ್ಯಾಚಾರ ಎಸಗಿ ಗರ್ಭಿಣಿಯಾಗಿಸಿದ್ದ. ಎರಡು ತಿಂಗಳ ನಂತರ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಆಕೆಯನ್ನು ಶಿವಮೊಗ್ಗದ ಸುರಭಿ ಉಜ್ವಲಾ ಕೇಂದ್ರಕ್ಕೆ ದಾಖಲಿಸಲಾಗಿತ್ತು.
ಶಿರಾಳಕೊಪ್ಪದಲ್ಲಿ ದಾಖಲಾಗಿದ್ದ ಪ್ರಕರಣವನ್ನು ಕಾಪು ಠಾಣೆಗೆ ವರ್ಗಾಯಿಸಲಾಗಿತ್ತು. ಕಾಪು ಠಾಣೆಯ ಸಿಬ್ಬಂದಿ ನಾರಾಯಣ ಮತ್ತು ರುಕ್ಮಯ ವಿಜಯನಗರಕ್ಕೆ ತೆರಳಿ ಅಲ್ಲಿಂದ ಬಳ್ಳಾರಿಗೆ ತೆರಳಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗೆ ಜೂ.20ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.