ಬೆಂಗಳೂರು: ರೇಷನ್ ಕಾರ್ಡ್ ತಿದ್ದುಪಡಿಗೆ ಕರ್ನಾಟಕ ಆಹಾರ, ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯು ಆ.10ರವರೆಗೆ ಅವಕಾಶ ನೀಡಿದೆ. ತಮ್ಮ ರೇಶನ್ ಕಾರ್ಡ್‌ಗಳಲ್ಲಿನ ಯಾವುದೇ ಸೇರ್ಪಡೆ, ತಿದ್ದುಪಡಿಗೆ ಇನ್ನು ಮೂರು ದಿನಗಳು ಮಾತ್ರ ಬಾಕಿಯುಳಿದಿವೆ. ಅಷ್ಟರೊಳಗೆ ಅರ್ಜಿ ಸಲ್ಲಿಸಿ ಬದಲಾವಣೆ ಮಾಡಿಕೊಳ್ಳಬಹುದು.
ಪಡಿತರ ಚೀಟಿ ಹೊಂದಿರುವವರು ಅದರಲ್ಲಿ ತಿದ್ದುಪಡಿ ಮಾಡಿಕೊಳ್ಳುವ ಸಂಬಂಧ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಪಡಿತರ ಚೀಟಿಯಲ್ಲಿ ಕುಟುಂಬ ಸದಸ್ಯರ ಹೆಸರು ತಿದ್ದುಪಡಿ, ಮನೆ ಯಜಮಾನರ ಬದಲಾವಣೆ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ, ಮೃತರ ಅಥವಾ ಬೇರೆ ಕುಟುಂಕ್ಕೆ ಸೇರಿದವರ ಹೆಸರು ತೆಗೆಯುವುದು, ಫೋಟೋ ಮತ್ತು ಬಯೋಮೆಟ್ರಿಕ್ ಅಪ್ಡೇಟ್ ಇದೆಲ್ಲವನ್ನೂ ಸ್ಥಳೀಯ ಗ್ರಾಮ ಒನ್ ಅಥವಾ ಡಿಜಿಟಲ್ ಸೇವಾ ಕೇಂದ್ರಗಳಲ್ಲಿ, ಇಲ್ಲವೇ https://ahara.kar.nic.in/Home/EServices ಮೂಲಕ ಮಾಡಿಕೊಳ್ಳಬಹುದಾಗಿದೆ.