ಮೂಡುಬಿದಿರೆ ವಿದ್ಯಾರ್ಥಿ ಆತ್ಮಹತ್ಯೆಗೆ ಕಾರಣ ಬಯಲು: ಡೆತ್‌ನೋಟ್‌ ನಲ್ಲಿ ಏನಿದೆ?

0
360

ಮೂಡುಬಿದಿರೆ: ಮೂಡುಬಿದಿರೆ ಹೊರವಲಯದ ಕಾಲೇಜುವೊಂದರ ದ್ವಿತೀಯ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆಗೂ ಮುನ್ನ ಬರೆದ ಡೆತ್‌ ನೋಟ್‌ ಪತ್ತೆಯಾಗಿದ್ದು, ಪ್ರೇಮವೈಫಲ್ಯ ಕಾರಣ ಎಂಬ ಅಂಶ ಬಯಲಾಗಿದೆ.

ಬೆಳಗಾವಿ ಜಿಲ್ಲೆ ನೆಹರು ನಗರದ ನಿವಾಸಿಯಾಗಿರುವ ಸೂರ್ಯಮ್ ಮಿಸಾ (೧೭) ಮೂಡುಬಿದಿರೆಯ ಕಾಲೇಜುವೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. ಈತ ಕಲ್ಲಬೆಟ್ಟು ಗ್ರಾಮದ ಮನೆಯೊಂದರಲ್ಲಿ ವಾಸ್ತವ್ಯವಿದ್ದು ಮನೆಯಲ್ಲಿರುವ ಫ್ಯಾನಿಗೆ ಬೆಡ್ ಶೀಟ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಇಂದು ಪತ್ತೆಯಾಗಿದ್ದ. ಸ್ಥಳಕ್ಕಾಗಮಿಸಿದ ಪೊಲೀಸರಿಗೆ ಆತ್ಮಹತ್ಯೆಗೆ ಮೊದಲು ಈತನೇ ಬರೆದಿಟ್ಟಿರುವ ಡೆತ್ ನೋಟ್ ಲಭ್ಯವಾಗಿದ್ದು, ಪ್ರೀತಿಯ ಬಲೆಯಲ್ಲಿ ಬಿದ್ದಿರುವ ಬಗ್ಗೆ ಒಂದು ಪುಟ ಆಂಗ್ಲ ಭಾಷೆಯಲ್ಲಿ ಬರೆದಿರುವ ಚೀಟಿ ಪೊಲೀಸರ ವಶವಾಗಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಯುವತಿ ಕೈಕೊಟ್ಟಿದ್ದರಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

LEAVE A REPLY

Please enter your comment!
Please enter your name here