ಕಳೆದ 27 ವರ್ಷಗಳಿಂದ ನಿರಂತರವಾಗಿ ಸಾಮಾಜಿಕ, ಸಾಂಸ್ಕೃತಿಕ, ಕ್ರೀಡಾ, ಧಾರ್ಮಿಕ, ಶೈಕ್ಷಣಿಕ, ಸ್ವಚ್ಛತೆ, ಆರೋಗ್ಯ ಮುಂತಾದ ಹಲವಾರು ಕ್ಷೇತ್ರದಲ್ಲಿ ವರ್ಷಪೂರ್ತಿ ನೂರಾರು ಕಾರ್ಯಕ್ರಮಗಳ ಮೂಲಕ ಎಲ್ಲರ ಗಮನಸೆಳೆದಿರುವ ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ಬಿನ ಸೇವಾ ಕಾರ್ಯಕ್ರಮಗಳನ್ನು ಗುರುತಿಸಿ ಬೆಳ್ಮಣ್ಣು ಜೆಸಿಐನ ಜೇಸಿ ಸಪ್ತಾಹ ಸಮಾರಂಭದಲ್ಲಿ ಗೌರವ ಸನ್ಮಾನ ನಡೆಸಿದರು.
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ಬಿನ ಪರವಾಗಿ ಸಂಘದ ಅಧ್ಯಕ್ಷರಾದ ಸುರೇಶ್ ಪೂಜಾರಿ ಅವರು ಸನ್ಮಾನ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ಬಿನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಅಬ್ಬನಡ್ಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಪ್ರದೀಪ್ ಸುವರ್ಣ ಮಾಜಿ ಕಾರ್ಯದರ್ಶಿ ಸತೀಶ್ ಪೂಜಾರಿ, ಕಾರ್ಯದರ್ಶಿ ಸುಭಾಷ್ ಕುಮಾರ್, ಮಹಿಳಾ ಸಂಘಟನಾ ಕಾರ್ಯದರ್ಶಿ ವೀಣಾ ಆಚಾರ್ಯ, ಸದಸ್ಯರಾದ ಹರೀಶ್ ಪೂಜಾರಿ, ಲೀಲಾ ಪೂಜಾರಿ, ವೀಣಾ ಪೂಜಾರಿ, ಪದ್ಮಶ್ರೀ ಪೂಜಾರಿ, ಅನ್ನಪೂರ್ಣ ಕಾಮತ್, ಕೀರ್ತನ್ ಪೂಜಾರಿ, ಅಶ್ವಿನಿ ಪ್ರಭಾಕರ್ ಮೊದಲಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಜೆಸಿಐ ಪೂರ್ವ ವಲಯಾಧ್ಯಕ್ಷೆ ಸೌಜನ್ಯ ಹೆಗಡೆ, ಬೆಳ್ಮಣ್ಣು ಜೆಸಿಐನ ಅಧ್ಯಕ್ಷರಾದ ವೀರೇಂದ್ರ ಆರ್. ಕೆ., ಅತಿಥಿಗಳಾದ ಬೆಳ್ಮಣ್ಣು ಶ್ರೀದೇವಿ ಜುವೆಲ್ಲರ್ಸ್ ನ ಮಾಲಕರಾದ ಬಿ. ಎಚ್. ವಸಂತ ಆಚಾರ್ಯ, ನಂದಳಿಕೆ ಚಾವಡಿ ಅರಮನೆಯ ಸುಹಾಸ್ ಹೆಗಡೆ, ಬೆಳ್ಮಣ್ಣು ಜೆಸಿಐನ ಪೂರ್ವ ಪೂರ್ವಾಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

