ಮಂಗಳೂರು: ಸಮಾಜ ಸೇವೆ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಮತ್ತು ಸಾಮಾಜಿಕ ಬದ್ಧತೆಯ ಮೂಲಕ ಸಮಾಜದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ.) ಕೃಷ್ಣಾಪುರಕ್ಕೆ 2026ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
ಸಮಿತಿಯು ಹಲವು ವರ್ಷಗಳಿಂದ ಸಮಾಜಮುಖಿ ಕಾರ್ಯಗಳು, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿದೆ. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ತನ್ನ ಸೇವಾ ಚಟುವಟಿಕೆಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿರುವ ಸಮಿತಿಯ ಕಾರ್ಯಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಸಮಿತಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುವುದು ಸದಸ್ಯರು, ಪದಾಧಿಕಾರಿಗಳು ಹಾಗೂ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ. ಮುಂದಿನ ದಿನಗಳಲ್ಲಿಯೂ ಸಮಿತಿಯು ಇನ್ನಷ್ಟು ಸಮಾಜಮುಖಿ ಕಾರ್ಯಗಳನ್ನು ಕೈಗೊಂಡು ಸಮಾಜದಲ್ಲಿ ಮತ್ತಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಹಿತೈಷಿಗಳು, ಸದಸ್ಯರು ಹಾಗೂ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ.

