ಮದುರೈ: ತಮಿಳುನಾಡಿನ ಮದುರೈ ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ ರೆಫ್ರಿಜರೇಟರ್ ಸ್ಫೋಟಗೊಂಡು ಇಬ್ಬರು ವಿದ್ಯಾರ್ಥಿನಿಯರು ಸಾವನ್ನಪ್ಪಿದ್ದಾರೆ. ಅಲ್ಲದೆ ಹಲವರು ಈ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಪರಿಮಳ ಮತ್ತು ಶರಣ್ಯಾ ಮೃತ ವಿದ್ಯಾರ್ಥಿನಿಯರು. ಘಟನೆ ಗುರುವಾರ ಮುಂಜಾನೆ ನಡೆದಿದೆ.
ಸ್ಫೋಟದ ಭೀಕರತೆಗೆ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು, ಹೊಗೆ ಆವರಿಸಿತ್ತು. ಉಳಿದವರನ್ನು ರಕ್ಷಿಸಲಾಗಿದೆ ಎಂದು ಮದುರೈ ಜಿಲ್ಲಾಧಿಕಾರಿ ಸಂಗೀತಾ ಹೇಳಿದ್ದಾರೆ.
ವಿದ್ಯಾರ್ಥಿನಿಯರಿಗೆ ಪರ್ಯಾಯ ವಸತಿ ಕಲ್ಪಿಸಲಾಗುವುದು. ಘಟನೆ ಕುರಿತು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಪಿ. ತೈಗರಾಜನ್ ಹೇಳಿದ್ದಾರೆ. ಸ್ಥಳಕ್ಕೆ ಆಗಮಿಸಿ ಸಚಿವರು ಪರಿಶೀಲಿಸಿದ್ದಾರೆ. ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.