ಕನಿಷ್ಠ ವಿಮಾ ಮೊತ್ತಕ್ಕೆ ಐಪಿಪಿಬಿ ಅಪಘಾತ ವಿಮಾ ಯೋಜನೆಗೆ ನೋಂದಣಿ-ಸುಧಾಕರ ಮಲ್ಯ

0
34

ಮಂಗಳೂರು: ಕನಿಷ್ಠ ವಿಮಾ ಪಾಲಿಸಿ ಕಂತಿನ ಪಾವತಿಯೊಂದಿಗೆ ಐಪಿಪಿಬಿ ಅಪಘಾತ ವಿಮಾ ಯೋಜನೆಗೆ ಜಾರಿಯಲ್ಲಿದೆ ಎಂದು ಮಂಗಳೂರು ವಿಭಾಗದ ಅಂಚೆ ಅಧೀಕ್ಷಕರಾದ ಸುಧಾಕರ ಮಲ್ಯ ತಿಳಿಸಿದ್ದಾರೆ.
      ನಗರದ ಪತ್ರಿಕಾ ಭವನದಲ್ಲಿ ಬುಧವಾರ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಭಾರತೀಯ ಅಂಚೆ ಇಲಾಖೆಯ ಸಹಭಾಗಿತ್ವದಲ್ಲಿ ಪತ್ರಕರ್ತರ ಸಂಘದ ಸದಸ್ಯರಿಗೆ 10 ಲಕ್ಷ ರೂಪಾಯಿ ವರೆಗಿನ ಅಪಘಾತ ವಿಮಾ ಯೋಜನೆ ನೋಂದಾವಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
 ಅಂಚೆ ಇಲಾಖೆಯ ಈ ಅಭಿಯಾನಕ್ಕೆ ಎಲ್ಲಡೆ ಉತ್ತಮ ಪ್ರತಿಕ್ರಯೆ ವ್ಯಕ್ತವಾಗಿದೆ .ಕಳೆದ ಸಾಲಿನಲ್ಲಿ ಭಾರತೀಯ ಅಂಚೆ ಇಲಾಖೆಯ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಮೂಲಕ ಮಂಗಳೂರು ವಿಭಾಗದಲ್ಲಿ ಕಳೆದ ಸಾಲಿನಲ್ಲಿ 21 ಸಾವಿರ ಮಂದಿ ಅಪಘಾತ ವಿಮೆ ನೋಂದಣಿ ಮಾಡಿಕೊಂಡಿದ್ದಾರೆ ಎಂದು ವಿಭಾಗದ ಅಂಚೆ ಅಧೀಕ್ಷಕರಾದ ಸುಧಾಕರ ಮಲ್ಯ ತಿಳಿಸಿದ್ದಾರೆ
.ಕರ್ನಾಟಕದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪತ್ರಕರ್ತಕರು ಅಂಚೆ ಇಲಾಖೆಯ ಅಪಘಾತ ವಿಮಾ ಯೋಜನೆಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ದ.ಕ.ಜಿಲ್ಲೆಯಲ್ಲಿ 310 ಮಂದಿ ಪತ್ರಕರ್ತರು ಜಿಲ್ಲಾ ಪತ್ರಕರ್ತರ ಸಮಘದ ಮೂಲಕ ನೋಂದಾಯಿಸಿಕೊಂಡಿದ್ದಾರೆ ಎಮದು ಮಾಹಿತಿ ನೀಡಿದರು.
  ಸಮಾರಮಭದ ಅಧ್ಯಕ್ಷತೆ ವಹಿಸಿದ್ದ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅವರು ಮಾತನಾಡಿ 10 ಲಕ್ಷ ರೂಪಾಯಿ ಅಪಘಾತ ವಿಮಾ ಯೋಜನೆ ಗೆ ಪ್ರತಿಯೊಬ್ಬರಿಗೆ 550 ರೂಪಾಯಿ ವೆಚ್ಚ ತಗಲುತ್ತಿದ್ದು, ಈ ಮೊತ್ತ ವನ್ನು ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಯಿಂದ ಪಾವತಿಸಲಾಗುವುದು. ಸಂಘದ ಸದಸ್ಯರಿಗೆ ಯಾವುದೇ ಶುಲ್ಕ ವಿರುವುದಿಲ್ಲ. ನೋಂದಾವಣೆ ಸಂಪೂರ್ಣ ಉಚಿತವಾಗಿರುತ್ತದೆ ಎಂದರು.
  ಉಪ ಅಂಚೆ ಅಧೀಕ್ಷಕ ದಿನೇಶ್, ಐಪಿಪಿಬಿ ಮ್ಯಾನೇಜರ್ ಸುಬ್ರಹ್ಮಣ್ಯ ಮಾಹಿತಿ ಅಂಚೆ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ಉಪಸ್ಥಿತರಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಸ್ವಾಗತಿಸಿದರು, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್ ಬಿ‌.ಎನ್ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.

LEAVE A REPLY

Please enter your comment!
Please enter your name here