ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ಜಿಲ್ಲೆಯ ಪತ್ರಕರ್ತರಿಗೆ ವಿರಾಮ ಯೋಗ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಜೂ.18ರಂದು ಬೆಳಗ್ಗೆ 11ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯಲಿದೆ.
ಜಿಲ್ಲಾ ಆಯುಷ್ ಅಧಿಕಾರಿ ಡಾ.ಮಹಮ್ಮದ್ ಇಕ್ಬಾಲ್ ಕೆ. ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ವೆನ್ಲಾಕ್ ಆಯುಷ್ ಆಸ್ಪತ್ರೆಯ ಯೋಗ ಮತ್ತು ಪ್ರಕೃತಿ ಚಿಕಿತ್ಸೆಯ ವೈದ್ಯಾಧಿಕಾರಿ ಡಾ.ಪ್ರಕಾಶ್ ಎ.ಜೆ., ಉಳ್ಳಾಲ ತಾಲೂಕು ಆಯುಷ್ ಘಟಕದ ಆಡಳಿತ ವೈದ್ಯಾಧಿಕಾರಿ ಡಾ.ಸಹನಾ ಪಿ. ವಿರಾಮ ಯೋಗದ ಪ್ರಾತ್ಯಕ್ಷಿಕೆ ನಡೆಸಿಕೊಡಲಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ.ಆರ್. ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.