Saturday, February 15, 2025
Homeಕಾರ್ಕಳಕಾರ್ಕಳ ವಿಧಾನಸಭಾ ಕ್ಷೇತ್ರದ ಮುಖ್ಯರಸ್ತೆಗಳ ನಿರ್ಮಾಣಕ್ಕೆ ರೂ.13.00 ಕೋಟಿ ಅನುದಾನ ಬಿಡುಗಡೆ

ಕಾರ್ಕಳ ವಿಧಾನಸಭಾ ಕ್ಷೇತ್ರದ ಮುಖ್ಯರಸ್ತೆಗಳ ನಿರ್ಮಾಣಕ್ಕೆ ರೂ.13.00 ಕೋಟಿ ಅನುದಾನ ಬಿಡುಗಡೆ

ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಹಾದು ಹೋಗುವ ಲೋಕೋಪಯೋಗಿ ಇಲಾಖೆ ಅಧೀನದಲ್ಲಿ ಬರುವ ಪ್ರಮುಖ ನಗರಗಳನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿಗಳನ್ನು ಹಾಗೂ ಜಿಲ್ಲಾ ಮುಖ್ಯ ಸಂಪರ್ಕ ರಸ್ತೆಗಳನ್ನು ಮತ್ತು ಸೇತುವೆಗಳನ್ನು ಅಭಿವೃದ್ಧಿಪಡಿಸಲು ಮಾನ್ಯ ಶಾಸಕರಾದ ಶ್ರೀ ವಿ ಸುನಿಲ್‌ ಕುಮಾರ್‌ ರವರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಪರಿಣಾಮವಾಗಿ ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯಿಂದ ಒಟ್ಟು ರೂ. 13.00 ಕೋಟಿ ಅನುದಾನ ಬಿಡುಗಡೆಯಾಗಿದೆ. ಈ ಕೆಳಗಿನ ರಸ್ತೆಗಳು ಮತ್ತು ಸೇತುವೆಗಳು ಈ ಅನುದಾನದಲ್ಲಿ ಅಭಿವೃದ್ಧಿಗೊಂಡು ಸಾರ್ವಜನಿಕ ಸಂಚಾರಕ್ಕೆ ಇನ್ನಷ್ಟು ಅನುಕೂಲಕರವಾಗಲಿದೆ.
ಕಾರ್ಕಳ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿ ಮಂಜೂರಾದ ಕಾಮಗಾರಿಗಳ ವಿವರ
ಮುದ್ರಾಡಿ – ಹೆಬ್ರಿ-ಬ್ರಹ್ಮಾವರ ರಾಜ್ಯ ಹೆದ್ದಾರಿ ಮುದ್ರಾಡಿ ಪೇಟೆಯಿಂದ ಜರುವತ್ತು ಸೇತುವೆ ವರೆಗೆ ರಸ್ತೆಯ ನವೀಕರಣಗೊಳಿಸುವುದು. ರೂ. 120.00 ಲಕ್ಷ
ಸುಬ್ರಹ್ಮಣ್ಯ-ಉಡುಪಿ ರಾಜ್ಯ ಹೆದ್ದಾರಿ-37ರ ಚೆಂಡೆ ಬಸದಿ ಕ್ರಾಸ್-ಬಜಗೋಳಿವರೆಗೆ ರಸ್ತೆಯನ್ನು ನವೀಕರಣಗೊಳಿಸುವುದು. ರೂ. 150.00 ಲಕ್ಷ
ಕಾಂಜರಕಟ್ಟೆ – ಇನ್ನಾ – ಸಾಂತೂರು ಕೊಪ್ಪ ಮುಂಡೂರು ಕಜೆಮಾರಿಗುಡಿ-ಸಚ್ಚರಿಪೇಟೆ ಜಿಲ್ಲಾಮುಖ್ಯ ರಸ್ತೆಯನ್ನು ಅಭಿವೃದ್ಧಿಗೊಳಿಸುವುದು. ರೂ 100.00 ಲಕ್ಷ
ಬೆಳುವಾಯಿ-ಕಾಂತಾವರ-ಮಂಜರಪಲ್ಕೆ ಜಿಲ್ಲಾಮುಖ್ಯ ರಸ್ತೆಯ ವಂಜಾರಕಟ್ಟೆಯಿಂದ ಬೋಪಾಡಿ ಸೇತುವೆ ವರೆಗೆ ರಸ್ತೆಯನ್ನು ಅಭಿವೃದ್ಧಿಗೊಳಿಸುವುದು. ರೂ 180.00 ಲಕ್ಷ
ಅಜೆಕಾರು-ಹೆರ್ಮುಂಡೆ-ಜಾರ್ಕಳ-ಕೆರವಾಶೆ ಜಿಲ್ಲಾಮುಖ್ಯ ರಸ್ತೆಯನ್ನು ಅಭಿವೃದ್ಧಿಪಡಿಸುವುದು. 250.00
ದುರ್ಗಾ-ಮುಂಡ್ಲಿ-ಶಿರ್ಲಾಲು ಜಿಲ್ಲಾಮುಖ್ಯ ರಸ್ತೆಯನ್ನು ಅಭಿವೃದ್ಧಿಪಡಿಸುವುದು. ರೂ. 250.00 ಲಕ್ಷ
ಮುಡಾರು ರಾಜ್ಯಹೆದ್ದಾರಿ ರಾಮೇರುಗುತ್ತು ಬಳಿ ಶಿಥಿಲಗೊಂಡಿರುವ ಕಿರಿದಾದ ಹಳೆಯ ಸೇತುವೆಯನ್ನು ಮರುನಿರ್ಮಿಸುವುದು ರೂ 100.00 ಲಕ್ಷ
ಬೆಳುವಾಯಿ-ಕಾಂತಾವರ-ಮಂಜರಪಲ್ಕೆ ಜಿಲ್ಲಾಮುಖ್ಯ ರಸ್ತೆಯಲ್ಲಿ ಅತಿಯಾದ ಮಳೆಯಿಂದ ಹಾನಿಗೊಂಡಿರುವ ಕಿರಿದಾದ ಸೇತುವೆಯನ್ನು (ಬರಬೈಲು) ಮರುನಿರ್ಮಿಸುವುದು. ರೂ. 150.00 ಲಕ್ಷ.ಮಂಜೂರಾಗಿದೆ.

RELATED ARTICLES
- Advertisment -
Google search engine

Most Popular