ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

0
15

ಕೊಯ್ಯೂರು : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೊಯ್ಯೂರು, ಶ್ರೀ ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೇರಾಲ್ ಕೊಯ್ಯೂರು ಮತ್ತು ಊರವರ ಜಂಟಿ ಆಶ್ರಯದಲ್ಲಿ ನಡೆಯುವ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷರು, ಶ್ರೀ ಕೃಷ್ಣ ಭಜನಾ ಮಂಡಳಿಯ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರುಗಳು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಭಜಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.