ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಮಾಣಿ ವಲಯ ಹಾಗೂ ಸಾಮೂಹಿಕ ಶ್ರೀ ಧನ್ವಂತರಿ ಪೂಜಾ ಸಮಿತಿ ಮಾಣಿ ವಲಯದ ಸಹಯೋಗದಲ್ಲಿ ನವೆಂಬರ್ 6ರಂದು ನಡೆಯಲಿರುವ ಸಾಮೂಹಿಕ ಶ್ರೀ ಧನ್ವಂತರಿ ಪೂಜೆಯ ಆಮಂತ್ರಣ ಪತ್ರಿಕೆಯನ್ನು ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಪೂಜಾ ಸಮಿತಿಯ ಗೌರವ ಸಲಹೆಗಾರರಾದ ರಾಜಾರಾಮ ಶೆಟ್ಟಿ, ಗೌರವಾಧ್ಯಕ್ಷರಾದ ಬಾಲಕೃಷ್ಣ ಆಳ್ವ, ಅಧ್ಯಕ್ಷರಾದ ಕೆ.ಎಸ್. ಪ್ರಕಾಶ್, ಉಪಾಧ್ಯಕ್ಷರಾದ ಸುರೇಶ್ ಮುಕ್ಕುಡ ಹಾಗೂ ತನಿಯಪ್ಪ ಗೌಡ, ಕಾರ್ಯದರ್ಶಿ ಹಾಗೂ ಮೇಲ್ವಿಚಾರಕಿ ಆಶಾಪಾರ್ವತಿ, ಸಮಿತಿ ಸದಸ್ಯರಾದ ಬಾಲಕೃಷ್ಣ ಪೂಜಾರಿ, ಹೊನ್ನಪ್ಪ ಗೌಡ ಸೇರಿದಂತೆ ಇತರ ಸದಸ್ಯರು ಉಪಸ್ಥಿತರಿದ್ದರು.
ದೇವಸ್ಥಾನದ ಅರ್ಚಕರು ಹಾಗೂ ಸೇವಾ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಭಾಗವಹಿಸಿದ್ದರು. ಸಾಮೂಹಿಕ ಧನ್ವಂತರಿ ಪೂಜೆಯನ್ನು ಯಶಸ್ವಿಯಾಗಿ ಆಯೋಜಿಸುವ ಕುರಿತು ಸಮಿತಿಯ ಸದಸ್ಯರು ಸಿದ್ಧತೆಗಳನ್ನು ಕೈಗೊಂಡಿದ್ದಾರೆ.

