`ಸನ್ಮತಿ’ ಪತ್ರಿಕೆ ಸಂಚಿಕೆ ಬಿಡುಗಡೆ- ಪೌರಾಯುಕ್ತರೊಂದಿಗೆ ಸಂವಾದ

0
6

ಉಡುಪಿ : ಉಡುಪಿಯ ಪತ್ರಕರ್ತರು ನಗರಸಭೆ ಮಾಡುವ ಕಾರ್ಯಗಳನ್ನು ತಮ್ಮ ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ತಲುಪಿಸುವ ಮೂಲಕ ಸಾರ್ವಜನಿಕರ ಬೇಡಿಕೆ ಹಾಗೂ ಸಮಸ್ಯೆಗಳನ್ನು ನಗರಸಭೆಯ ಗಮನಕ್ಕೆ ತರುವ ಮಹತ್ತರ ಕೆಲಸ ಮಾಡುತ್ತಿದ್ದಾರೆ ಎಂದು ಉಡುಪಿ ನಗರಸಭೆ ಪೌರಾಯುಕ್ತ ಹಂಗರಗಿ ಹೇಳಿದ್ದಾರೆ.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಬುಧವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾದ ತಿಂಗಳ ಅಂಗಳ ಸಂವಾದ ಕಾರ್ಯಕ್ರಮದಲ್ಲಿ ಸಂಘದ `ಸನ್ಮತಿ’ ಪತ್ರಿಕೆಯ ಏಪ್ರಿಲ್ ತಿಂಗಳ ಸಂಚಿಕೆಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡುತಿದ್ದರು.

ಅಧ್ಯಕ್ಷತೆಯನ್ನು ಸಂಘದ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ ವಹಿಸಿದ್ದರು. ವಾರ್ತಾಧಿಕಾರಿ ಮಂಜುನಾಥ್, ಸಂಘದ ಕೋಶಾಧಿಕಾರಿ ಹರೀಶ್ ಕುಂದರ್ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ರಹೀಂ ಉಜಿರೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here