Thursday, December 5, 2024
Homeಧಾರ್ಮಿಕಹಿಂದೂ ಯುವ ಸೇನೆ ಹಾಗೂ ಮಹಿಳಾ ಘಟಕದ ವತಿಯಿಂದ 26ನೇ ವರ್ಷದ ಶ್ರೀ ಶಾರದಾ ಮಹೋತ್ಸವದ...

ಹಿಂದೂ ಯುವ ಸೇನೆ ಹಾಗೂ ಮಹಿಳಾ ಘಟಕದ ವತಿಯಿಂದ 26ನೇ ವರ್ಷದ ಶ್ರೀ ಶಾರದಾ ಮಹೋತ್ಸವದ ಪ್ರಯುಕ್ತ ಧಾರ್ಮಿಕ ಸಭಾ ಕಾರ್ಯಕ್ರಮ

ಮುಲ್ಕಿ: ಹಿಂದೂ ಯುವ ಸೇನೆ ಹಾಗೂ ಮಹಿಳಾ ಘಟಕದ ವತಿಯಿಂದ 26ನೇ ವರ್ಷದ ಶ್ರೀ ಶಾರದಾ ಮಹೋತ್ಸವದ ಪ್ರಯುಕ್ತ ಧಾರ್ಮಿಕ ಸಭಾ ಕಾರ್ಯಕ್ರಮ ಶಿವಾಜಿ ಮಂಟಪದ ವೇದಿಕೆಯಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾಧರ್ ಶೆಟ್ಟಿ ಕೋಲ್ನಾಡುಗುತ್ತು ವಹಿಸಿ ಮಾತನಾಡಿ ಶರನ್ನವರಾತ್ರಿ ಪರ್ವಕಾಲದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಯುವ ಜನಾಂಗದಲ್ಲಿ ಧರ್ಮ ಜಾಗೃತಿ ಮೂಡಿಸುವ ಕಾರ್ಯ ಅಭಿನಂದನೀಯ, ಮಕ್ಕಳು ಮೊಬೈಲ್, ಸಾಮಾಜಿಕ ಜಾಲತಾಣದಿಂದ ದೂರವಿದ್ದು ಧಾರ್ಮಿಕ ಹಾಗೂ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಬೇಕು ಎಂದರು
ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಉದ್ಯಮಿ ಲೋಕಯ್ಯ ಕಟೀಲ್, ಅವಿಭಾಜಿತ ದ.ಕ. ಹಾಗೂ ಉಡುಪಿ ಜಿಲ್ಲೆಯ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ಮಧು ಆಚಾರ್ಯ, ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವ ಪ್ರಸಾದ್ ಪುನರೂರು, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್,ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ರಾಷ್ಟ್ರೀಯ ಬಿಲ್ಲವರ ಮಹಾ ಮಂಡಳಿಯ ಮಹಿಳಾ ಮಂಡಳಿಯ ಅಧ್ಯಕ್ಷೆ ಗೀತಾಂಜಲಿ ಸುವರ್ಣ, ಉದ್ಯಮಿ ಉದಯ ಸುವರ್ಣ ಕಿಲ್ಪಾಡಿ ,ಮುಲ್ಕಿ ಹಿಂದೂ ಯುವ ಸೇನೆಯಅಧ್ಯಕ್ಷ ವಿನೋದ್ ಸಾಲ್ಯಾನ್ ಬೆಳ್ಳಾಯರು, ಕೋಶಾಧಿಕಾರಿ ಅಶ್ವತ್ ಕೊಲಕಾಡಿ,ಮಹಿಳಾ ಘಟಕದ ಉಪಾಧ್ಯಕ್ಷೆ ಸುಲತಾ, ಕಾರ್ಯದರ್ಶಿ ಯಶೋಧಾ ದೇವಾಡಿಗ,ಭಾನುಮತಿ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು , ವಿನೋದ್ ಸಾಲ್ಯಾನ್ ಸ್ವಾಗತಿಸಿದರು, ಶಂಕರ್ ಪಡಂಗ ಧನ್ಯವಾದ ಅರ್ಪಿಸಿದರು,ಕಮಲಾಕ್ಷ ಬಡಗುಹಿತ್ಲು ನಿರೂಪಿಸಿದರು
ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

RELATED ARTICLES
- Advertisment -
Google search engine

Most Popular