ಮೂಡುಬಿದಿರೆ : ಸಾಧನಾ ಶ್ರೇಷ್ಠ, ನಿಟ್ಟೆ ವಿನಯ ಹೆಗ್ಡೆ ಅವರು ಶಿಕ್ಷಣ ತಜ್ಞರಾಗಿದ್ದು, ದೇಶಾಭಿಮಾನಿ ಮತ್ತು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಅವರು ಶ್ರೀ ಮಠದ ನಿಷ್ಠಾವಂತ ಭಕ್ತರಾಗಿದ್ದು, ಸಮಾಜಕ್ಕೆ ಅಪಾರ ಸೇವೆ ಸಲ್ಲಿಸಿದ್ದರು. ಅವರ ಅಗಲಿದ ಆತ್ಮಕ್ಕೆ ಉತ್ತಮ ಸದ್ಗತಿ ಸಿಗಲಿ ಹಾಗೂ ಅವರ ಅಗಲುವಿಕೆಯಿಂದ ಉಂಟಾದ ದುಃಖವನ್ನು ಸಹಿಸುವ ಶಕ್ತಿ ಭಗವಂತ ನೀಡಲಿ ಎಂದು ಜಗದ್ಗುರು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ಶ್ರೀ ದಿಗಂಬರ ಜೈನ ಮಠ, ಮೂಡುಬಿದಿರೆ ನಲ್ಲಿ ಜಿನೇಂದ್ರ ಭಗವಂತರಲ್ಲಿ, ಜಿನ ಶಾಸನ ದೇವರಲ್ಲಿ ಪ್ರಾರ್ಥಿಸಿದ್ದಾರೆ.

