ಬೆಳಪು–ಪಣಿಯೂರು ಶ್ರೀ ಬ್ರಹ್ಮ ಬೈದರ್ಕಳ ಗರಡಿ ಜೀರ್ಣೋದ್ಧಾರ : ನ. 1ರಂದು ಮುಂಬಯಿ ಸಮಿತಿ ರಚನೆಗೆ ಸಭೆ

0
18

ಮುಂಬಯಿ ಬಿಲ್ಲವ ಭವನದಲ್ಲಿ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಅಧ್ಯಕ್ಷತೆಯಲ್ಲಿ ಸಭೆ

ಮುಂಬಯಿ: ಬೆಳಪು–ಪಣಿಯೂರು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ ನೀಡುವ ಉದ್ದೇಶದಿಂದ ಮುಂಬಯಿ ಸಮಿತಿಯನ್ನು ರಚಿಸಲು ನವೆಂಬರ್ 1ರಂದು ಭಾನುವಾರ ಸಂಜೆ 4 ಗಂಟೆಗೆ ಸಾಂತಾಕ್ರೂಜ್ ಪೂರ್ವದ ಬಿಲ್ಲವ ಭವನದಲ್ಲಿ ಸಭೆ ಆಯೋಜಿಸಲಾಗಿದೆ.

ಗರಡಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಮುಂಬಯಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ನೆಲೆಸಿರುವ ಬೆಳಪು–ಪಣಿಯೂರು ಗ್ರಾಮದ ಬಾಂಧವರು, ಭಕ್ತರು ಹಾಗೂ ಹಿತೈಷಿಗಳನ್ನು ಒಗ್ಗೂಡಿಸಿ ಜೀರ್ಣೋದ್ಧಾರ ಕಾರ್ಯವನ್ನು ವ್ಯವಸ್ಥಿತವಾಗಿ ಮುನ್ನಡೆಸುವುದು ಸಭೆಯ ಪ್ರಮುಖ ಉದ್ದೇಶವಾಗಿದೆ.

ಸಭೆಯಲ್ಲಿ ಮುಂಬಯಿ ಸಮಿತಿಯ ರಚನೆ, ಗರಡಿಯ ಜೀರ್ಣೋದ್ಧಾರ ಕಾರ್ಯಗಳ ರೂಪುರೇಷೆ, ದೇಣಿಗೆ ಸಂಗ್ರಹ, ಮುಂದಿನ ಕಾರ್ಯಕ್ರಮಗಳು ಹಾಗೂ ಕಾರ್ಯಯೋಜನೆಗಳ ಕುರಿತು ಚರ್ಚೆ ನಡೆಯಲಿದೆ. ಗರಡಿಯ ಪವಿತ್ರ ಜೀರ್ಣೋದ್ಧಾರ ಕಾರ್ಯಕ್ಕೆ ಹೆಚ್ಚಿನ ಜನರ ಸಹಕಾರ ಮತ್ತು ಬೆಂಬಲವನ್ನು ಕ್ರೋಢೀಕರಿಸುವ ನಿಟ್ಟಿನಲ್ಲಿ ಈ ಸಭೆ ಮಹತ್ವ ಪಡೆದಿದೆ.

ಬೆಳಪು–ಪಣಿಯೂರು ಗ್ರಾಮದ ಬಾಂಧವರು, ಭಕ್ತರು, ಅಭಿಮಾನಿಗಳು ಹಾಗೂ ಸರ್ವ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸಿ, ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಜೀರ್ಣೋದ್ಧಾರ ಕಾರ್ಯಕ್ಕೆ ಕೈಜೋಡಿಸಿ ಸಹಕಾರ ನೀಡುವಂತೆ ಆಯೋಜಕರು ವಿನಂತಿಸಿದ್ದಾರೆ.