Sunday, July 21, 2024
Homeಸಿನಿಮಾದರ್ಶನ್‌ ಬಂಧನಕ್ಕೊಳಗಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣಗೆ ನೋಟಿಸ್

ದರ್ಶನ್‌ ಬಂಧನಕ್ಕೊಳಗಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣಗೆ ನೋಟಿಸ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ಚಿಕ್ಕಣ್ಣಗೆ ನೋಟಿಸ್‌ ಜಾರಿ ಮಾಡಿದ್ದಾರೆ. ಪಶ್ಚಿಮ ವಿಭಾಗದ ಪೊಲೀಸರು ಚಿಕ್ಕಣ್ಣಗೆ ನೋಟಿಸ್‌ ಜಾರಿಗೊಳಿಸಿದ್ದಾರೆ ಎಂದು ವರದಿಗಳಾಗಿವೆ.
ಕಾಮಾಕ್ಷಿಪಾಳ್ಯ ಠಾಣೆಗೆ ತಕ್ಷಣವೇ ಆಗಮಿಸಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ರೇಣುಕಾಸ್ವಾಮಿ ಕೊಲೆ ನಡೆಯುವುದಕ್ಕೂ ಮುನ್ನ ಬಂಧಿತ ಆರೋಪಿ ವಿನಯ್‌ಗೆ ಸೇರಿದ ಸ್ಟೋನಿ ಬ್ರೂಕ್‌ ಹೋಟೆಲ್‌ನಲ್ಲಿ ಪಾರ್ಟಿ ನಡೆದಿತ್ತು. ಪಾರ್ಟಿಯಲ್ಲಿ ದರ್ಶನ್‌, ಚಿಕ್ಕಣ್ಣ, ವಿನಯ್‌, ಪವನ್‌ ಇದ್ದರು ಎನ್ನಲಾಗಿದೆ. ಆಗ ಈ ಪ್ರಕರಣಕ್ಕೆ ಸಂಬಂಧಿಸಿ ಏನಾದರೂ ಮಾತುಕತೆ ನಡೆದಿತ್ತೇ ಎಂಬುದರ ಬಗ್ಗೆ ವಿಚಾರಣೆ ನಡೆಸಲು ಚಿಕ್ಕಣ್ಣಗೆ ನೋಟಿಸ್‌ ಜಾರಿ ಮಾಡಲಾಗಿದೆ ಎನ್ನಲಾಗಿದೆ.

RELATED ARTICLES
- Advertisment -
Google search engine

Most Popular