ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ವಿರುದ್ಧ ಬಲವಾದ ಸಾಕ್ಷ್ಯ ಸಿಕ್ಕಿದೆ ಎಂದು ವರದಿಗಳು ತಿಳಿಸಿವೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯಲ್ಲಿ ಪಟ್ಟಣಗೆರೆ ಶೆಡ್ ಹಾಗೂ ಆರೋಪಿಗಳಿಂದ ಸಂಗ್ರಹಿಸಿದ್ದ ಸಾಕ್ಷ್ಯಗಳನ್ನು ಪೊಲೀಸರು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ಆ ವರದಿ ಈಗ ಲಭ್ಯವಾಗಿದೆ.
ಎಫ್‌ಎಸ್‌ಎಲ್ ವರದಿಯಲ್ಲಿ ದರ್ಶನ್ ಬಟ್ಟೆಗಳ ಮೇಲೆ ಕೊಲೆಯಾದ ರೇಣುಕಾಸ್ವಾಮಿ ದೇಹದ ರಕ್ತದ ಕಲೆಗಳು ಪತ್ತೆಯಾಗಿವೆ ಎಂದು ವರದಿಗಳು ತಿಳಿಸಿವೆ. ಇದು ಅತಿದೊಡ್ಡ ಸಾಕ್ಷಿಯಾಗಲಿದ್ದು, ಪ್ರಕರಣದಲ್ಲಿ ದರ್ಶನ್‌ಗೆ ದೊಡ್ಡ ಕಂಟಕವಾಗಲಿದೆ. ಕೊಲೆಯಾದ ಮೇಲೆ ದರ್ಶನ್ ಮನೆಯಲ್ಲಿದ್ದ ನೀಲಿ ಜೀನ್ಸ್ ಪ್ಯಾಂಟ್ ಮತ್ತು ಕಪ್ಪು ರೌಂಡ್ ನೆಕ್ ಶರ್ಟ್ ವಶಪಡಿಸಿಕೊಂಡಿದ್ದರು. ಅದನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿತ್ತು.