Saturday, December 14, 2024
Homeಬೆಂಗಳೂರುರೇಣುಕಾಸ್ವಾಮಿ ಕೊಲೆ ಪ್ರಕರಣ | ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ಗೆ ವರ್ಗಾಯಿಸಲು ಚಿಂತನೆ: ಬಿ ದಯಾನಂದ

ರೇಣುಕಾಸ್ವಾಮಿ ಕೊಲೆ ಪ್ರಕರಣ | ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ಗೆ ವರ್ಗಾಯಿಸಲು ಚಿಂತನೆ: ಬಿ ದಯಾನಂದ

ಬೆಂಗಳೂರು: ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ ಅಥವಾ ಸ್ಪೆಷಲ್ ಕೋರ್ಟ್‌ಗೆ ಒಪ್ಪಿಸಲು ಮನವಿ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ. ದಯಾನಂದ್‌ ತಿಳಿಸಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಗುತ್ತಿದೆ. ಫಾಸ್ಟ್ ಟ್ರ‍್ಯಾಕ್ ಕೋರ್ಟ್ ಅಥವಾ ಸ್ಪೆಷಲ್ ಕೋರ್ಟ್‌ಗೆ ಮನವಿ ಮಾಡಲು ಚಿಂತನೆ ನಡೆಸಲಾಗುತ್ತಿದೆ. ಬಹುಪಾಲು ರಿಪೋರ್ಟ್‌ಗಳು ಚಾರ್ಜ್‌ಶೀಟ್‌ ಸಲ್ಲಿಕೆಗೂ ಮುನ್ನವೇ ನಮ್ಮ ಕೈಸೇರಿದೆ. ಮತ್ತಷ್ಟು ರಿಪೋರ್ಟ್‌ ಬರಬೇಕಿದೆ, ಆ ಬಳಿಕ ಕೋರ್ಟ್‌ಗೆ ಸಲ್ಲಿಸುತ್ತೇವೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ಗೆ ರಾಜಾತಿಥ್ಯ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಆಗ್ನೇಯ ವಿಭಾಗ ಡಿಸಿಪಿ ಸಾರಾ ಫಾತೀಮಾ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಸಿಸಿಬಿ ಜಂಟಿ ಪೊಲೀಸ್ ಡಾ. ಚಂದ್ರಗುಪ್ತ ನೇತೃತ್ವದಲ್ಲಿ ಅಧಿಕಾರಿಗಳ ಪಾತ್ರದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular