ಜ. 26 ರಂದು ಕಲಾಕುಂಚದಿಂದ ಗಣರಾಜ್ಯೋತ್ಸವ ಧ್ವಜಾರೋಹಣ

0
80

ದಾವಣಗೆರೆ : ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ಜನವರಿ 26 ರಂದು ಸೋಮವಾರ ಬೆಳಿಗ್ಗೆ 8 ಗಂಟೆಗೆ ನಗರದ ದಾವಣಗೆರೆಯ ಕಸ್ತೂರ್ಬಾ ಬಡಾವಣೆಯ ಕುವೆಂಪು ರಸ್ತೆಯಲ್ಲಿರುವ ಕಲಾಕುಂಚ ಕಛೇರಿಯ ಹೊರಾಂಗಣದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ಪ್ರಯುಕ್ತ ಧ್ವಜಾರೋಹಣ ಹಮ್ಮಿಕೊಳ್ಳಲಾಗಿದೆ ಎಂದು ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್‌ಶೆಣೈ ತಿಳಿಸಿದ್ದಾರೆ.

ದಾವಣಗೆರೆಯ `ಕಲಾಸಿರಿ” ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕರಾದ ವಾಸುದೇವ ಎಲ್.ರಾಯ್ಕರ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಕಲಾಕುಂಚ ಸಂಸ್ಥೆಯ ಅಧ್ಯಕ್ಷರಾದ ಕೆ.ಹೆಚ್.ಮಂಜುನಾಥ್ ವಹಿಸಲಿದ್ದಾರೆ. ಕಲಾಕುಂಚ ವಿವಿಧ ಬಡಾವಣೆ ಶಾಖೆಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಗಣರಾಜ್ಯೋತ್ಸವ ಯಶಸ್ವಿಗೊಳಿಸಬೇಕಾಗಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here