ಐವನ್ ಡಿʼಸೋಜಾ ನೇತೃತ್ವದಲ್ಲಿ ಅಂಬೇಡ್ಕರ್ ಭವನ ನಿರ‍್ಮಾಣಕ್ಕೆ ₹5 ಕೋಟಿ ಅನುದಾನಕ್ಕೆ ಮನವಿ – ಸಚಿವ ಕೆ.ಹೆಚ್. ಮುನಿಯಪ್ಪರಿಂದ ಭರವಸೆ

0
7

ಜಿಲ್ಲಾ ಅದಿದ್ರಾವಿಡ ಸಮಾಜ ಸೇವಾ ಸಂಘದ ನೇತೃತ್ವದಲ್ಲಿ ಸುರತ್ಕಲ್ ಹೋಬಳಿಯ ಕುಂಜತ್‌ಬೈಲ್ ಗ್ರಾಮದಲ್ಲಿ ಅಂಬೇಡ್ಕರ್ ಭವನ ನರ‍್ಮಾಣಕ್ಕೆ ₹5 ಕೋಟಿ ಅನುದಾನ ನೀಡುವಂತೆ ವಿಧಾನ ಪರಿಷತ್ತಿನ ಶಾಸಕರಾದ ಐವನ್ ಡಿ’ಸೋಜಾ ಅವರ ನೇತೃತ್ವದ ನಿಯೋಗವು ಸಮಾಜ ಕಲ್ಯಾಣ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ಸಂಘದ ಅಧ್ಯಕ್ಷರಾದ ರಘುನಾಥ್ ಅತ್ತಾವರ, ಸಂಜೀವ ಕೋಟ್ಯಾನ್, ಆನಂದ್ ಅತ್ತಾವರ, ಈಶ್ವರ್, ಅವಿನಾಶ್ ಕುಂಜತ್‌ಬೈಲ್ ಹಾಗೂ ಪ್ರಶಾಂತ್ ಸೇರಿದಂತೆ ನಿಯೋಗದ ಸದಸ್ಯರು ಸಚಿವರನ್ನು ಭೇಟಿ ಮಾಡಿ, ಸುಮಾರು ₹5 ಕೋಟಿ ವೆಚ್ಚದಲ್ಲಿ ನರ‍್ಮಾಣಗೊಳ್ಳಲಿರುವ ಸಮುದಾಯ ಭವನಕ್ಕೆ ಅಗತ್ಯ ಅನುದಾನವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ಈ ಅಂಬೇಡ್ಕರ್ ಭವನದಲ್ಲಿ ಭವ್ಯ ಸಭಾಂಗಣ, ಮಿನಿ ಹಾಲ್, ಸಹಕಾರಿ ಸಂಘದ ಕೌಶಲ್ಯಾಭಿವೃದ್ಧಿ ಹಾಗೂ ತರಬೇತಿ ಕೇಂದ್ರ, ಮಹಿಳಾ ಘಟಕದ ಕಚೇರಿ, ಕುಲದೈವದ ಅಧ್ಯಯನ ಕೇಂದ್ರ, ವಿವಿಧ ತರಬೇತಿ ಕರ‍್ಯಕ್ರಮಗಳಿಗೆ ಅಗತ್ಯ ಸೌಲಭ್ಯಗಳು ಸೇರಿದಂತೆ ಸಮುದಾಯದ ಅಭಿವೃದ್ಧಿಗೆ ಪೂರಕವಾದ ಮೂಲಸೌರ‍್ಯಗಳನ್ನು ಕಲ್ಪಿಸಲು ಅವಕಾಶವಿದೆ ಎಂದು ಐವನ್ ಡಿ’ಸೋಜಾ ಅವರು ಸಚಿವರ ಗಮನಕ್ಕೆ ತಂದರು.

ಮನವಿಗೆ ಸಚಿವ ಕೆ.ಹೆಚ್. ಮುನಿಯಪ್ಪ ಅವರು ಉತ್ತಮವಾಗಿ ಸ್ಪಂದಿಸಿದ್ದು, ಮುಂದಿನ 15 ದಿನಗಳೊಳಗಾಗಿ ಈ ಕುರಿತು ತರ‍್ಮಾನ ಕೈಗೊಂಡು ಅಗತ್ಯ ಅನುದಾನ ಬಿಡುಗಡೆ ಮಾಡುವುದಾಗಿ ನಿಯೋಗಕ್ಕೆ ಭರವಸೆ ನೀಡಿದ್ದಾರೆ. ಈ ಮೂಲಕ ಸಮುದಾಯದ ಶೈಕ್ಷಣಿಕ, ಸಾಮಾಜಿಕ ಹಾಗೂ ರ‍್ಥಿಕ ಅಭಿವೃದ್ಧಿಗೆ ಪೂರಕವಾಗುವ ಈ ಮಹತ್ವದ ಯೋಜನೆಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿರುವುದು ಸಂತಸ ತಂದಿದೆ ಎಂದು ಐವನ್ ಡಿ’ಸೋಜಾ ಅವರು ತಿಳಿಸಿದ್ದಾರೆ. ಈ ಸಂದರ‍್ಭದಲ್ಲಿ ನಿಯೋಗದ ಸದಸ್ಯರು ಸಚಿವರಿಗೆ ಧನ್ಯವಾದಗಳನ್ನು ಸಲ್ಲಿಸಿದರು.