ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ.),ಕನ್ನಡ ಗ್ರಾಮ, ಕಾಸರಗೋಡು ಇದರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ, ಕೇರಳ ರಾಜ್ಯ ದಾಸ ಸಾಹಿತ್ಯ ಪರಿಷತ್ತು, ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಕಾಸರಗೋಡು ಕನ್ನಡ ಗ್ರಾಮದಲ್ಲಿ 2026 ನವಂಬರ್ 7 ಮತ್ತು 8 ರಂದು ನಡೆಯುವ ಕೇರಳ ರಾಜ್ಯ 8 ನೇ ಕನ್ನಡ ಸಮ್ಮೇಳನ ಮತ್ತು ಕೇರಳ- ಕರ್ನಾಟಕ ಉತ್ಸವ, ಕೇರಳ – ಕರ್ನಾಟಕ ಕನ್ನಡ ರಾಜ್ಯೋತ್ಸವ ಹಾಗೂ ಕೇರಳ ರಾಜ್ಯ ದ್ವಿತೀಯ ಮಕ್ಕಳ ಸಾಹಿತ್ಯ ಸಮ್ಮೇಳನ – 2026 ಇದರ ಆಮಂತ್ರಣ ಪತ್ರಿಕೆಯನ್ನು ಅಂಚೆ ಮೂಲಕ ಕಳುಹಿಸಲು ಕೇರಳ ರಾಜ್ಯ ಸಹಿತ ಕಾಸರಗೋಡು ಜಿಲ್ಲೆಯ ವಿವಿಧ ಕನ್ನಡ ಪರ ಸಂಘಟನೆಗಳು ಹಾಗೂ ಕಲಾವಿದರು, ಲೇಖಕರು, ಸಾಹಿತಿಗಳು, ಕವಿಗಳು, ಮಾಧ್ಯಮದವರು, ಸಾಮಾಜಿಕ ಜಾಲತಾಣಗಳ ಅಡ್ಮಿನ್ ಗಳು ಮತ್ತು ಕೇರಳ ರಾಜ್ಯದ ಮೂಲದವರು ದೇಶ, ವಿದೇಶಗಳಲ್ಲಿ ಉದ್ಯೋಗ, ವ್ಯವಹಾರ ನಿಮಿತ್ತ ನೆಲೆಸಿದವರು, ಸಾರ್ವಜನಿಕರು, ಸಾಹಿತ್ಯಾಸಕ್ತರು ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಆಜೀವ ಸದಸ್ಯರು ತಮ್ಮ ಹೆಸರು, ವಿಳಾಸ, ಮೊಬೈಲ್,ವಾಟ್ಸ್ ಪ್ ಸಂಖ್ಯೆಯನ್ನು ಸಾಮಾನ್ಯ ಅಂಚೆಯ ಮೂಲಕ ಬರೆದು ಕಳುಹಿಸಲು ವಿನಂತಿಸಲಾಗಿದೆ.
ಸಂಪರ್ಕ ವಿಳಾಸ :- ಶಿವರಾಮ ಕಾಸರಗೋಡು, ಅಧ್ಯಕ್ಷರು,ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ.),ಕನ್ನಡ ಗ್ರಾಮ, ಕನ್ನಡ ಗ್ರಾಮ ರಸ್ತೆ, ಕಾಸರಗೋಡು -671121
ಮೊಬೈಲ್ :9448572016,
9901951965 ಅಥವಾ ವಾಟ್ಸ್ ಪ್ ಮೂಲಕ ಈ ವಿಳಾಸಕ್ಕೆ ಕಳುಹಿಸಬಹುದು.
Email :-
Shivaramakasaragod @gmail.com

