
ಉಡುಪಿ : ನಗರದ ಶಿರಿಬೀಡು ಸರಸ್ವತಿ ಪ್ರಾಥಮಿಕ ಶಾಲೆಯ ಸಮೀಪ ವ್ಯಕ್ತಿಯೊಬ್ಬರು ಕುಸಿದುಬಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಘಟನೆ ಶುಕ್ರವಾರ ನಡೆದಿದೆ.
ಹೆದ್ದಾರಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸ್ ಠಾಣೆಯ ಗಣೇಶ ಶೆಟ್ಟಿ ಅವರು ಇದನ್ನು ಗಮನಿಸಿ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ನಿತ್ಯಾನಂದ ಒಳಕಾಡು ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ರಕ್ಷಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ಸದ್ಯ ವ್ಯಕ್ತಿಯ ಹೆಸರು ಹಾಗೂ ವಿಳಾಸದ ಮಾಹಿತಿ ಲಭ್ಯವಾಗಿಲ್ಲ. ಈ ವ್ಯಕ್ತಿಯ ವಾರಸುದಾರರು ಅಥವಾ ಪರಿಚಯಸ್ಥರು ಹೆಚ್ಚಿನ ಮಾಹಿತಿಗಾಗಿ ಉಡುಪಿ ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.
