ಮುಲ್ಕಿ: ಗ್ರಾಮೀಣ ಪ್ರದೇಶದ ಬೆಳಪು ಗ್ರಾಮ ಪಂಚಾಯಿತನ್ನು ಮಾದರಿ ಗ್ರಾಮ ಪಂಚಾಯತಾಗಿ ರೂಪಿಸಿ, ಕಂಬಳ, ಸಹಕಾರಿ ಕ್ಷೇತ್ರದಲ್ಲಿ ಸಾಧಕರಾಗಿ ಡಾ. ದೇವಿ ಪ್ರಸಾದ್ ಶೆಟ್ಟಿ ಬೆಳಪು ರವರ ಸಾಧನೆ ಅಭಿನಂದನೀಯ ಎಂದು ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ಹೇಳಿದರು.
ಅವರು ಮುಲ್ಕಿ ಸೀಮೆಯ ಅರಮನೆ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಡಾ.ದೇವಿ ಪ್ರಸಾದ್ ಶೆಟ್ಟಿ ರವರನ್ನು ಸಾಧಕರ ನೆಲೆಯಲ್ಲಿ ಗೌರವಿಸಿ ಮಾತನಾಡಿದರು.
ಸಭೆಯಲ್ಲಿ ಪಡುಪಣಂಬೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಕುಸುಮಾ ಚಂದ್ರಶೇಖರ್, ಸದಸ್ಯ ಉಮೇಶ್ ಪೂಜಾರಿ, ಮುಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸತೀಶ್ ಅಂಚನ್,ಮಾಜೀ ಅಧ್ಯಕ್ಷ ಸುನಿಲ್ ಆಳ್ವ ,ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಚ್ ವಸಂತ್ ಬರ್ನಾಡ್, ಸೀಮೆ ಅರಸು ಕಂಬಳ ಸಮಿತಿ ಅಧ್ಯಕ್ಷ ಕಿರಣ್ ಕುಮಾರ್ ಶೆಟ್ಟಿ ಕೋಲ್ನಾಡುಗುತ್ತು, ಸಮಿತಿಯ ಶಶಿಂದ್ರ ಸಾಲ್ಯಾನ್, ಗೌತಮ್ ಜೈನ್ ಮುಲ್ಕಿ ಅರಮನೆ, ರಾಜೇಂದ್ರ ಜೈನ್ ,ಸತೀಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು ಗೌತಮ್ ಜೈನ್ ಸ್ವಾಗತಿಸಿ ನಿರೂಪಿಸಿದರು