ದಾವಣಗೆರೆ: ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ದಸರಾ ಹಬ್ಬದ ಪ್ರಯುಕ್ತ ರಾಜ್ಯ ಮಟ್ಟದ “ದಸರಾ ಕಾವ್ಯ ಸಂಭ್ರಮ” ಉಚಿತ ಕವನ ಬರೆಯುವ ಸ್ಪರ್ಧೆ ಹಮ್ಮಿಕೊಂಡಿದ್ದು ಫಲಿತಾಂಶ ಈ ಕೆಳಗಿನಂತಿದೆ ಎಂದು ತೀರ್ಪುಗಾರರಲ್ಲಿ ಒಬ್ಬರಾದ ಸಾಹಿತಿ, ಕವಯತ್ರಿ ಅನ್ನಪೂರ್ಣ ಪಾಟೀಲ್ ತಿಳಿಸಿದ್ದಾರೆ.
ಪ್ರಥಮ ಬಹುಮಾನ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರಿನ ಡಾ|| ಸುಮತಿ ಪಿ. ದ್ವಿತೀಯ ಬಹುಮಾನ ಬೆಳಗಾವಿ ಜಿಲ್ಲೆಯ ಸುಲಕ್ಷಣ ಲಕ್ಷ್ಮಣರಾವ್ ಯಕ್ಕಂಡಿ, ತೃತೀಯ ಬಹುಮಾನ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೆಗಡೆಕಟ್ಟೆಯ ಸುವರ್ಣ ಮಯ್ಯರ್ ಹಾಗೂ ಮೆಚ್ಚುಗೆ ಬಹುಮಾನಗಳು ದಾವಣಗೆರೆಯ ಕುಸುಮಾ ಲೋಕೇಶ್ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಗೊಪ್ಪೇನಹಳ್ಳಿಯ ದರ್ಶನ್ ಸಂಕೋಳ್, ಬೆಳಗಾವಿ ಜಿಲ್ಲೆಯ ಖಾನಾಪುರದ ಸಂಗೀತ ಆರ್ ಸಕ್ರೆಣ್ಣನವರ ಪಡೆದಿರುತ್ತಾರೆ ಎಂದು ತಿಳಿಸಿದ್ದಾರೆ. ಸ್ಪರ್ಧೆಯ ನಿಯಮದಂತೆ ಯಾವುದೇ ಸಭೆ ಸಮಾರಂಭ ಇಲ್ಲದೇ ಬಹುಮಾನ ವಿಜೇರಿಗೆ ಮಾತ್ರ ಸ್ಪರ್ಧೆಯ ನಂತರ ಫಲಿತಾಂಶ, ಅಭಿನಂದನಾ ಪತ್ರವನ್ನು ಸ್ಪರ್ಧಿಗಳು ಕೊಟ್ಟ ವ್ಯಾಟ್ಸಪ್ ಸಂಖ್ಯೆಗೆ ಕಳಿಸಲಾಗುತ್ತದೆ. ಕಲಾಕುಂಚದ ಅಧ್ಯಕ್ಷರಾದ ಕೆ.ಹೆಚ್.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ಸೇರಿದಂತೆ ಪದಾಧಿಕಾರಿಗಳು, ಸರ್ವ ಸದಸ್ಯರು, ಅಭಿಮಾನದಿಂದ ಅಭಿನಂದನೆ ಸಲ್ಲಿಸಿದ್ದಾರೆ.