ಕುವೆಂಪು ವಿವಿ ನಿವೃತ್ತ ಅಧೀಕ್ಷಕ ಎಂ ಸಿದ್ದರಾಮು ಕಾಂಗ್ರೆಸ್ ಸೇರ್ಪಡೆ

0
23

ವರದಿ: ಮಂದಾರ ರಾಜೇಶ್ ಭಟ್ ತುಳುನಾಡು ವಾರ್ತೆ


ತುಳುನಾಡು : ಕುವೆಂಪು ವಿಶ್ವವಿದ್ಯಾಲಯದಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಎಂ ಸಿದ್ದರಾಮು ಇವರು ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಆದ ಮಧು ಬಂಗಾರಪ್ಪನವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಹೊಂದಿದರು.

ಅವರು ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸಿ ಇತ್ತೀಚಿಗೆ ನಿವೃತ್ತಿ ಹೊಂದಿದ್ದು ಇವರು ಅನೇಕ ಸಂಘ ಸಂಸ್ಥೆಗಳಲ್ಲಿ ಅಧ್ಯಕ್ಷರಾಗಿ ಹಾಗೂ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಆರ್ ಪ್ರಸನ್ನ ಕುಮಾರ್, ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎಂ ರಮೇಶ್ ಶಂಕರಘಟ್ಟ, ಮಹಿಳಾ ವಿಭಾಗದ ಅಧ್ಯಕ್ಷ ಶ್ವೇತಾ ಬಂಡಿ, ಪ್ರಮುಖರಾದ ಕಲಗೋಡು ರತ್ನಾಕರ್ , ಜಿ.ಡಿ ಮಂಜುನಾಥ್ ಮತ್ತಿತರರು ಇದ್ದರು ಎಂದು ರಮೇಶ್ ಶಂಕರಘಟ್ಟ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here