ಇಂದಿನಿಂದ ಗೃಹಜ್ಯೋತಿ ಯೋಜನೆ ಮರುಪರಿಶೀಲನೆ ಆರಂಭ

0
14

ಮಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನಾ ಕಾರ್ಯಕ್ಕೆ ಬುಧವಾರ (ಜುಲೈ 1)ದಿಂದ ಚಾಲನೆ ನೀಡಲಾಗಿದೆ. ಯೋಜನೆಯಡಿ ಅರ್ಹ ಫಲಾನುಭವಿಗಳ ಮಾಹಿತಿಯನ್ನು ಮರುದೃಢೀಕರಿಸುವ ಉದ್ದೇಶದಿಂದ ರಾಜ್ಯದ ಎಲ್ಲ ಎಸ್ಕಾಂಗಳ ವ್ಯಾಪ್ತಿಯಲ್ಲಿ ಈ ವಿಶೇಷ ಅಭಿಯಾನ ನಡೆಯಲಿದೆ.

2023ರ ಜುಲೈ ತಿಂಗಳಲ್ಲಿ ಜಾರಿಗೆ ಬಂದಿದ್ದ ಗೃಹಜ್ಯೋತಿ ಯೋಜನೆಯ ಪುನರ್‌ಪರಿಶೀಲನೆಯ ಅಂಗವಾಗಿ ಬೆಸ್ಕಾಂ, ಹೆಸ್ಕಾಂ, ಮೆಸ್ಕಾಂ, ಜೆಸ್ಕಾಂ ಹಾಗೂ ಸೆಸ್ಕ್‌ನ ಮೀಟರ್ ರೀಡರ್‌ಗಳು ಮತ್ತು ಸಿಬ್ಬಂದಿ ಮನೆಗಳಿಗೆ ಭೇಟಿ ನೀಡಿ ದಾಖಲೆಗಳ ಪರಿಶೀಲನೆ ನಡೆಸಲಿದ್ದಾರೆ. ಫಲಾನುಭವಿಗಳ ಮಾಹಿತಿಯನ್ನು ಮೊಬೈಲ್ ಆ್ಯಪ್‌ನಲ್ಲಿ ದಾಖಲಿಸಿ, ಘೋಷಣಾ ಪತ್ರದ ಮೂಲಕ ಅರ್ಜಿ ಭರ್ತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಿದ್ದಾರೆ.

ಪರಿಶೀಲನೆ ವೇಳೆ ಅಗತ್ಯ ದಾಖಲೆಗಳು:

  • ಆಧಾರ್ ಕಾರ್ಡ್
  • ಫಲಾನುಭವಿಯ ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರ
  • ಮತದಾರರ ಗುರುತಿನ ಚೀಟಿ (ವೋಟರ್ ಐಡಿ)
  • ಪ್ಯಾನ್ ಕಾರ್ಡ್
  • ರೇಷನ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಬಾಡಿಗೆ ಒಪ್ಪಂದ ಪತ್ರ (ಅನ್ವಯಿಸುವಲ್ಲಿ ಮಾತ್ರ)

ರಾಜ್ಯದ ಐದು ಎಸ್ಕಾಂಗಳ ವ್ಯಾಪ್ತಿಯಲ್ಲಿ ಈ ಪರಿಶೀಲನಾ ಕಾರ್ಯ ನಡೆಯಲಿದ್ದು, ಮೀಟರ್ ರೀಡರ್ ಮೂಲಕ ಸ್ಥಳದಲ್ಲೇ ದಾಖಲೆ ಪರಿಶೀಲನೆ ನಡೆಸುವುದು ಈ ಪ್ರಕ್ರಿಯೆಯ ಏಕೈಕ ವಿಧಾನವಾಗಿದೆ.

ಹೀಗಾಗಿ, ಗೃಹಜ್ಯೋತಿ ಯೋಜನೆಯ ಫಲಾನುಭವಿಗಳು ಎಸ್ಕಾಂ ಸಿಬ್ಬಂದಿಗೆ ಅಗತ್ಯ ದಾಖಲೆಗಳನ್ನು ಒದಗಿಸಿ, ಪರಿಶೀಲನಾ ಕಾರ್ಯಕ್ಕೆ ಸಂಪೂರ್ಣ ಸಹಕಾರ ನೀಡುವಂತೆ ಇಂಧನ ಇಲಾಖೆ ಮನವಿ ಮಾಡಿದೆ.

LEAVE A REPLY

Please enter your comment!
Please enter your name here