ರಿಕ್ಷಾ ಪಲ್ಟಿ : ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಸಾವು

0
29

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಆಟೋ ರಿಕ್ಷಾವೊಂದು ಮಗುಚಿ ಬಿದ್ದು ಚಾಲಕ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಬದ್ಯಾರ್ ಸಮೀಪ ರವಿವಾರ ಸಂಭವಿಸಿದೆ. ಮೃತರನ್ನು ಮಾಲಾಡಿ ನಿವಾಸಿ ಶಿವಾನಂದ ಪಿ. ಮಾಳವ (33) ಎಂದು ತಿಳಿದುಬಂದಿದೆ.

ಗುರುವಾಯನಕೆರೆಯಿಂದ ಅಳದಂಗಡಿಗೆ ಪ್ರಯಾಣಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ ಶಿವಾನಂದ ಅವರನ್ನು ಸ್ಥಳೀಯರ ಸಹಕಾರದೊಂದಿಗೆ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ದರೂ ಆ ವೇಳೆಗೆ ಮೃತಪಟ್ಟಿದ್ದರು.

ಸಹಪ್ರಯಾಣಿಕ ಶಿವರಾಜ್ ಗಾಯಗೊಂಡಿದ್ದು, ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಠಾಣೆಯ ಪೊಲೀಸರು ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here