ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್

0
20

ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.
ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಹರೇನ್ ನ ಉದ್ಯಮಿ, ಮೆಟಲ್ ಕೋ ಮ್ಯಾನೇಜಿಂಗ್ ಡೈರೆಕ್ಟರ್ ಹಾಗೂ ದ.ಕ. ಜಿಲ್ಲಾ ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಅಬ್ದುಲ್ ರಜಾಕ್ ಕೋಟೆ ಹೆಜಮಾಡಿ, ಬಹರೖನ್ ಕನ್ನಡ ಸಂಘದ ಪೂರ್ವಾಧ್ಯಕ್ಷ ಆಸ್ಟಿನ್ ಸಂತೋಷ್, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ. ಬಿ. ಹರೀಶ್ ರೈ, ಪೋಲಿಸ್ ಇಲಾಖೆಯ ವಿಶೇಷ ಘಟಕದ ಎಎಸ್ಐ ಗೋಪಾಲಕೃಷ್ಣ ಬಜ್ಪೆ ಮತ್ತು ಅಂತರಾಷ್ಟ್ರೀಯ ಸಾಂಸ್ಕೃತಿಕ ಸೌರಭ ಪರಿಷತ್ ಅಧ್ಯಕ್ಷ ಕೆ. ಪಿ. ಮಂಜುನಾಥ್ ಸಾಗರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here