ಬೊಲೆರೋ ಹಾಗೂ ಬಲ್ಕರ್ ವಾಹನಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಪೇತೇನಹಳ್ಳಿ ಬಳಿ ನಡೆದಿದೆ. ಗೌರಿಬಿದನೂರು ಹಿಂದೂಪುರ ಕಡೆಯಿಂದ ಬೆಂಗಳೂರಿಗೆ ಬರುತಿದ್ದ ಬಲ್ಕರ್ ಲಾರಿ , ಬೆಂಗಳೂರಿನಿಂದ ಗೌರಿಬಿದನೂರು ಕಡೆಗೆ ಬರುತಿದ್ದ ಬುಲೆರೊ ವಾಹನ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಎರಡು ವಾಹನಗಳು ನಜ್ಜು ಗುಜ್ಜಾಗಿವೆ . ಜಕ್ಕೇನಹಳ್ಳಿ ಮೂಲದ ಅಶೋಕ್( 25) ಹಾಗೂ ಆಂಧ್ರದ ನಾಗರಾಜಪ್ಪ ಮೃತಪಟ್ಟಿದ್ದಾರೆ . ಈ ಬಗ್ಗೆ ಮಂಚೆನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



