ರೂ.50 ಲಕ್ಷ ವೆಚ್ಚದಲ್ಲಿ ಹೆಜಮಾಡಿ ಕಾಲೋನಿ ರಸ್ತೆ ಅಭಿವೃದ್ಧಿಗೆ ಚಾಲನೆ

0
16

50 ಲಕ್ಷ ರೂಪಾಯಿ ವೆಚ್ಚದ ಹೆಜಮಾಡಿ ಕೋಡ್ದಬ್ಬು ದೈವಸ್ಥಾನ ಬಳಿಯಿಂದ ಗಿರಿಜಾ ಮನೆ ವರೆಗೆ ಕಾಲೋನಿ ರಸ್ತೆಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ

ಹೆಜಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೆಜಮಾಡಿ ಕೋಡ್ದಬ್ಬು ದೈವಸ್ಥಾನ ಬಳಿಯಿಂದ ಗಿರಿಜಾ ಮನೆ ವರೆಗೆ ಕಾಲೋನಿ ರಸ್ತೆಗೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ 50 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 03-09-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಹೆಜಮಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ರೇಷ್ಮಾ ಮೆಂಡನ್, ಮಾಜಿ ಉಪಾಧ್ಯಕ್ಷರಾದ ಮೋಹನ್ ಸುವರ್ಣ, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಶರಣ್ ಕುಮಾರ್ ಮಟ್ಟು, ಹೆಜಮಾಡಿ ಬಿಲ್ಲವ ಸಂಘದ ಪದಾಧಿಕಾರಿಗಳು ಹಾಗೂ ಹೆಜಮಾಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರು, ಹೆಜಮಾಡಿ ಶಕ್ತಿ ಕೇಂದ್ರದ ಪ್ರಮುಖರು ಉಪಸ್ಥಿತರಿದ್ದರು.