ಅರಳ ಆರೋಗ್ಯ ಉಪ ಕೇಂದ್ರಕ್ಕೆ ರೋಟರಿ ಕ್ಲಬ್‌ನಿಂದ ಫ್ರಿಡ್ಜ್ ಕೊಡುಗೆ

0
4

ಬಂಟ್ವಾಳ ತಾಲ್ಲೂಕಿನ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ಅರಳ ಸರಕಾರಿ ಪ್ರಾಥಮಿಕ ಆರೋಗ್ಯ ಉಪ ಕೇಂದ್ರಕ್ಕೆ ಫ್ರಿಡ್ಜ್ ಕೊಡುಗೆ ಬುಧವಾರ ಹಸ್ತಾಂತರಿಸಲಾಯಿತು.

ಕ್ಲಬ್ಬಿನ ಅಧ್ಯಕ್ಷೆ ಎಂ.ಗೀತಾ ಪದ್ಮರಾಜ್ ಬಲ್ಲಾಳ್, ಕಾರ್ಯದರ್ಶಿ ರೂಪಾ ರಾಜೇಶ್ ಶೆಟ್ಟಿ ಸೀತಾಳ, ಮಾಜಿ ಅಧ್ಯಕ್ಷ ರಾಮಚಂದ್ರ ಶೆಟ್ಟಿಗಾರ್ ಅಣ್ಣಳಿಕೆ, ಸದಸ್ಯರಾದ ಕೆ.ರಮೇಶ ನಾಯಕ್ ರಾಯಿ, ಮೋಹನ್ ಕೆ.ಶ್ರೀಯಾನ್ ರಾಯಿ, ಸಮುದಾಯ ಆರೋಗ್ಯಾಧಿಕಾರಿ ಸಾಗರ್ ಎ. ಮತ್ತಿತರರು ಇದ್ದರು.