ರೋಟರಿ ಕ್ಲಬ್ ಕಾರ್ಕಳ; ಆಕ್ಯುಪ್ರೆಶರ್ ಆರೋಗ್ಯ ಶಿಬಿರ ಉದ್ಘಾಟನೆ

0
59

ಕಾರ್ಕಳ : ರೋಗಿಯ ಆತ್ಮಸ್ಥೈರ್ಯವೇ ರೋಗಗಳ ಚಿಕಿತ್ಸೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ವೈದ್ಯರ ಯಾವುದೇ ಚಿಕಿತ್ಸೆಯು ರೋಗಿಯ ಮನೋಸ್ಥೈರ್ಯವನ್ನು ಅವಲಂಬಿಸಿದೆ ಎಂದು ರೋಟರಿ ಜಿಲ್ಲೆಯ ಮಾಜಿ ಗವರ್ನರ್ ಡಾ. ಭರತೇಶ್ ಆದಿರಾಜ್ ಹೇಳಿದರು.

ಅವರು ಕಾರ್ಕಳ ಅನಂತಶಯನ ರೋಟರಿ ಬಾಲ ಭವನದಲ್ಲಿ ರೋಟರಿ ಕ್ಲಬ್ ಕಾರ್ಕಳ ಇದರ ವತಿಯಿಂದ ರಾಮ್ ಮನೋಹರ್ ಲೋಹಿಯಾ ಆರೋಗ್ಯ ಜೀವನ್ ಸಂಸ್ಥೆ ರಾಜಸ್ಥಾನ್ ಇವರ ಸಹಯೋಗದೊಂದಿಗೆ ನಡೆಯುತ್ತಿರುವ ಆಕ್ಯುಪ್ರೆಶರ್ ಆರೋಗ್ಯ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಅಧ್ಯಕ್ಷತೆಯನ್ನು ವಹಿಸಿದ ಕ್ಲಬ್ಬಿನ ಅಧ್ಯಕ್ಷರಾದ ನವೀನ್ ಚಂದ್ರ ಶೆಟ್ಟಿ ಅವರು ಮಾತನಾಡಿ ಒಂದು ವಾರ ಗಳ ಕಾಲ ನಡೆಯುವ ಈ ಶಿಬಿರದಲ್ಲಿ ಕಾರ್ಕಳದ ಜನತೆ ಪಾಲ್ಗೊಂಡು ಇದರ ಪ್ರಯೋಜನ ಸಿಗುವಂತಾಗಲಿ ಎಂದು ಶುಭ ಹಾರೈಸಿದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಸಹಾಯಕ ಗವರ್ನರ್ ವಿಘ್ನೇಶ್ ಶೆಣೈ ವಲಯ ಕಾರ್ಯದರ್ಶಿ ಅಲ್ವಿನ್ ನ್ಯಾರಿ ಪಿಂಟೋ ಉಪಸ್ಥಿತರಿದ್ದು ಶುಭ ಹಾರೈಸಿದರು.

ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಸ್ವಾಗತಿಸಿದರು. ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯ ರವೀಂದ್ರ ಕುಮಾರ್ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ವಸಂತ್ ಎಂ ಕಾರ್ಯಕ್ರಮ ನಿರೂಪಿಸಿದರು .ಕಾರ್ಯದರ್ಶಿ ಚೇತನ್ ನಾಯಕ್ ವಂದಿಸಿದರು.

LEAVE A REPLY

Please enter your comment!
Please enter your name here