ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಕಲಬುರಗಿ ಜಿಲ್ಲೆಯ ಪಟ್ಟಣ ಗ್ರಾಮದಲ್ಲಿ ನಡೆದಿದೆ. ಸೋಮು ತಾಳಿಕೋಟಿ (40) ಬರ್ಬರವಾಗಿ ಕೊಲೆಯಾದ ರೌಡಿಶೀಟರ್.
ಕಲಬುರಗಿಯ ಪಟ್ಟಣ ಗ್ರಾಮದಲ್ಲಿ ಕೊಲೆ ಮಾಡಿ ಆಳಂದ ರಸ್ತೆಯ ರೈಲ್ವೆ ಹಳಿ ಬಳಿ ಶವ ಎಸೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಕೆಲ ತಿಂಗಳ ಹಿಂದೆ ಸೋಮು ಪಟ್ಟಣ ಗ್ರಾಮದ ಡಾಬಾ ಮಾಲೀಕನ ಜೊತೆ ಈತ ಜಗಳವಾಡಿದ್ದನು. ಅಲ್ಲದೆ ಸೋಮು ಮತ್ತು ಆತನ ಸಂಗಡಿಗರು ಡಾಬಾ ಮಾಲೀಕನ ಮೇಲೆ ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಹೀಗಾಗಿ ಹಳೆಯ ವೈಷಮ್ಯದ ಹಿನ್ನೆಲೆ ಈ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.