ಕಾರ್ಕಳ ವಿಧಾನಸಭಾ ಕ್ಷೇತ್ರದ ಕುಚ್ಚೂರು ಮಾತ್ಕಲ್ ಕೊರಗ ಕಾಲನಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ರೂ 02.05 ಕೋಟಿ ಅನುದಾನ ಮಂಜೂರು : ವಿ ಸುನಿಲ್ ಕುಮಾರ್

0
185

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲೂಕಿನ ಕುಚ್ಚೂರು ಗ್ರಾಮದ ಮಾತ್ಕಲ್ ಕೊರಗರ ಕಾಲನಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಪಿಎಂ ಜನ್ ಮನ್ ಯೋಜನೆಯಡಿ ರೂ. 02.05 ಕೋಟಿ ಅನುದಾನ ಮಂಜೂರಾಗಿರುತ್ತದೆ ಎಂದು ಕಾರ್ಕಳ ಶಾಸಕ ವಿ‌ ಸುನಿಲ್ ಕುಮಾರ್ ಅವರು ತಿಳಿಸಿರುತ್ತಾರೆ.

ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಜನ ಜಾತಿಯ ಮಹಾ ನ್ಯಾಯ ಅಭಿಯಾನದಡಿ (PM JANMAN) ಮೂಲ ನಿವಾಸಿಗಳಾದ ಕೊರಗ ಸಮುದಾಯದವರು ಹೆಚ್ಚಾಗಿ ವಾಸಿಸುವ ಪ್ರದೇಶವಾದ ಹೆಬ್ರಿ ತಾಲೂಕಿನ ಕುಚ್ಚೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾತ್ಕಲ್ ಕೊರಗ ಕಾಲೋನಿ ರಸ್ತೆ ಕಾಂಕ್ರೀಟೀಕರಣಕ್ಕಾಗಿ ರೂ. 02.05 ಕೋಟಿ ಮೊತ್ತದ ಅನುದಾನ ಬಿಡುಗಡೆಯಾಗಿದ್ದು,  ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಅನುಷ್ಠಾನಗೊಳಿಸಲಾಗುತ್ತಿದೆ.

ನೆಚ್ಚಿನ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಪರಿಕಲ್ಪನೆಯಡಿ ಕಾರ್ಯ ನಿರ್ವಹಿಸುತ್ತಿದೆ. ಸಮಾಜದ ಎಲ್ಲಾ ಸ್ಥರದ ಜನರು ಮುಖ್ಯವಾಹಿನಿಗೆ ಬರಬೇಕೆಂಬ ಆಶಯವನ್ನು ಹೊಂದಿದ್ದು, ಇದರ ಭಾಗವಾಗಿ ಇಂದು ಮಾತ್ಕಲ್ ಕೊರಗ ಕಾಲನಿ ರಸ್ತೆ ಅಭಿವೃದ್ಧಿ ಹೊಂದುತ್ತಿದೆ.

ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಆದಷ್ಟೂ ಶೀಘ್ರವಾಗಿ ಕಾಮಗಾರಿಯನ್ನು ಪ್ರಾರಂಭಿಸಿಲಾಗುವುದು ಎಂದು ಕಾರ್ಕಳ ಶಾಸಕರ ʻವಿಕಾಸʼ ಜನಸೇವಾ ಕಛೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here