ಧರ್ಮಸ್ಥಳದಲ್ಲಿ ರುದ್ರಪಾರಾಯಣ

0
16


ಉಜಿರೆ: ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಶುಕ್ರವಾರ ಶ್ರೀ ರಾಮಚಂದ್ರಾಪುರ ಮಠದ ಪೂಜ್ಯ ರಾಘವೇಶ್ವರಭಾರತಿ ಸ್ವಾಮೀಜಿಯವರ ಆಶೀರ್ವಾದಗಳೊಂದಿಗೆ ಹವ್ಯಕ ಮಹಾಮಂಡಲದ ೫೫೦ ಕ್ಕೂ ಮಿಕ್ಕಿದ ಶಿಷ್ಯ ವೃಂದದವರು ಹಾಗೂ ವಿದ್ವಾಂಸರು ಧರ್ಮಸ್ಥಳ ಬಂದು ಪವಿತ್ರ ತೀರ್ಥ ಕ್ಷೇತ್ರ ಹಾಗೂ ಹೆಗ್ಗಡೆಯವರ ಬಗ್ಯೆ ಇರುವ ಅಪಪ್ರಚಾರ ಮತ್ತು ಗೊಂದಲ ಸುಲಲಿತವಾಗಿ ನಿವಾರಣೆಯಾಗಿ ಮನಃಶಾಂತಿ, ನೆಮ್ಮದಿ ನೆಲೆಸಲಿ ಎಂದು ದೇವಸ್ಥಾನದಲ್ಲಿ ರುದ್ರಾನುಷ್ಠಾನ ಸಮರ್ಪಣೆ ಬಳಿಕ ಪ್ರವಚನ ಮಂಟಪದಲ್ಲಿ ರುದ್ರಪಾರಾಯಣ ಸೇವೆಯನ್ನು ಶ್ರದ್ಧಾ-ಭಕ್ತಿಯಿಂದ ಮಾಡಿದರು.
ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಪೂಜ್ಯ ರಾಘವೇಶ್ವರ ಭಾರತೀ ಸ್ವಾಮೀಜಿಯವರು ವಯಸ್ಸಿನಲ್ಲಿ ಕಿರಿಯವರಾದರೂ  ಜ್ಞಾನವೃದ್ಧರಾಗಿದ್ದು, ವಿಶೇಷ ನಾಯಕತ್ವದ ಲಕ್ಷಣ ಹೊಂದಿದ್ದಾರೆ. ತಮ್ಮ ಮೇಲೆ ಹಾಗೂ ಧರ್ಮಸ್ಥಳದ ಬಗ್ಯೆ ಅಪಾರ ಪ್ರೀತಿ-ವಿಶ್ವಾಸ, ಗೌರವ ಹೊಂದಿರುವ ಪೂಜ್ಯರ ಆಶೀರ್ವಾದಗಳಿಂದ ಕಷ್ಟದಿಂದ ಪಾರಾಗಿ ಕೊನೆಗೆ ಜಯಸಿಗಬಹುದು  ಎಂದು ಹೆಗ್ಗಡೆಯವರು ವಿಶ್ವಾಸ ವ್ಯಕ್ತಪಡಿಸಿದರು.
ಶ್ರೀರಾಮನೂ, ರಾವಣನಿಂದ ಹಿಂಸೆ ಅನುಭವಿಸಿ ಕೊನೆಗೆ ಜಯಶೀಲನಾದ. ಪೂಜ್ಯರ ಪರವಾಗಿ ಶಿಷ್ಯರು, ವಿದ್ವಾಂಸರೆಲ್ಲ ಧರ್ಮಸ್ಥಳಕ್ಕೆ ಬಂದು ಆಶೀರ್ವಾದ ಮಾಡಿ ಗೌರವಿಸಿರುವುದಕ್ಕೆ ಹೆಗ್ಗಡೆಯವರು ಸಂತಸ ವ್ಯಕ್ತಪಡಿಸಿ ಎಲ್ಲರಿಗೂ ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹವಿರಲಿ ಎಂದು ಪ್ರಾರ್ಥಿಸಿ, ಶುಭ ಹಾರೈಸಿದರು.

ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವೀ. ಹೆಗ್ಗಡೆಯವರನ್ನು ಗೌರವಿಸಲಾಯಿತು.
ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.
ಶ್ರೀಮಠದ ವೈದಿಕ ವಿದ್ವಾಂಸರಿAದ ವಿಪ್ರಾಶೀರ್ವಾದ ನಡೆಯಿತು. ಹವ್ಯಕ ಮಹಾಮಂಡಲದ ಅಧ್ಯಕ್ಷ ಪಳ್ಳತ್ತಡ್ಕ ಶಂಕರನಾರಾಯಣ ಭಟ್ ಅವರನ್ನು ಹೆಗ್ಗಡೆಯವರು ಗೌರವಿಸಿದರು.
ರಾಮಚಂದ್ರಾಪುರ ಮಠದ ಶಾಸ್ತಿçಗಳಾದ ಸುಚೇತನ ಶಾಸ್ತಿç, ಹವ್ಯಕ ಮಹಾಮಂಡಲದ ಅಧ್ಯಕ್ಷ ಹರಿಪ್ರಸಾದ್, ಕಾರ್ಯದರ್ಶಿ ಮಹೇಶ್ ಚಟ್ನಳ್ಳಿ, ಮಾತೃವಿಭಾಗದ ಅಧ್ಯಕ್ಷರಾದ ದೇವಿಕಾ ಶಾಸ್ತ್ರಿ, ಈಶ್ವರಿ, ಉಜಿರೆಯ

LEAVE A REPLY

Please enter your comment!
Please enter your name here