Saturday, April 19, 2025
Homeಕುಂದಾಪುರರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಾರಕೂರು: ಬೌದ್ಧಿಕ ಆಸ್ತಿ ಹಕ್ಕುಗಳ...

ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಾರಕೂರು: ಬೌದ್ಧಿಕ ಆಸ್ತಿ ಹಕ್ಕುಗಳ ಕಾರ್ಯಾಗಾರ

ಬಾರಕೂರು: ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಬಾರ್ಕೂರು, ಐಕ್ಯೂಎಸಿ, ರಿಸರ್ಚ್ ಆಂಡ್ ಡೆವಲಪ್ಮೆಂಟ್ ಸೆಲ್ ಮತ್ತು ಯೂತ್ ರೆಡ್ ಕ್ರಾಸ್ ಜಂಟಿ ಆಶ್ರಯದಲ್ಲಿ ಬೋಧಕರಿಗೆ ಎಫ್.ಡಿ.ಪಿ. ಕಾರ್ಯಕ್ರಮ ಶನಿವಾರ ನಡೆಯಿತು. ನ್ಯಾಯವಾದಿ ಡಾ. ಸಂತೋಷ್ ಪ್ರಭು ಅವರು ಸಂಪನ್ಮೂಲ ವ್ಯಕ್ತಿಯಾಗಿ ಬೌದ್ಧಿಕ ಆಸ್ತಿ ಹಕ್ಕುಗಳು (ಇನ್ಟಲೆಕ್ಚುವಲ್ ಪ್ರಾಪರ್ಟಿ ರೈಟ್ಸ್) ಕುರಿತು ವಿಸ್ತ್ರತವಾದ ಮಾಹಿತಿ ನೀಡಿದರು.

ಕಾಪಿರೈಟ್, ಟ್ರೇಡ್ ಮಾರ್ಕ್ಸ್, ಪೇಟೆಂಟ್ ಔಚಿತ್ಯಗಳ ಕುರಿತು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಭಾಸ್ಕರ ಶೆಟ್ಟಿ ಎಸ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಜಾಗತೀಕರಣವು ಅಂತರರಾಷ್ಟ್ರೀಯ ಒಪ್ಪಂದಗಳ ಮೂಲಕ ಬೌದ್ಧಿಕ ಆಸ್ತಿ ಹಕ್ಕುಗಳನ್ನು ಬಲಪಡಿಸಿ, ನಾವೀನ್ಯತೆ ಮತ್ತು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಿದೆ. ಆದಾಗ್ಯೂ, ಇದು ಸವಾಲುಗಳಿಗೆ ಕಾರಣವಾಗಿದೆ. ಬೌದ್ಧಿಕ ಆಸ್ತಿ ಹಕ್ಕುಗಳ ಬಗ್ಗೆ ಪ್ರತಿಯೊಬ್ಬರೂ ಸಂಪೂರ್ಣವಾಗಿ ತಿಳಿದುಕೊಳ್ಳುವ ಅವಶ್ಯಕತೆಯಿದೆ ಎಂದರು.

ರಿಸರ್ಚ್ ಆಂಡ್ ಡೆವಲಪ್ಮೆಂಟ್ ಸೆಲ್ ಸಂಯೋಜಕರು ಮತ್ತು ಹಿರಿಯ ಪ್ರಾಧ್ಯಾಪಕರಾದ ಪ್ರೊ. ಪ್ರಸಾದ್ ರಾವ್, ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯೋಜಕರಾದ ಶೋಭಾ ಆರ್., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಹರೀಶ್ ಸಿ.ಕೆ., ಯೂತ್ ರೆಡ್ ಕ್ರಾಸ್ ಸಂಯೋಜಕರಾದ ಸತೀಶ್ ಕುಮಾರ್ ಬಿ.ಡಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಐಕ್ಯೂಎಸಿ ಸಂಯೋಜಕಿ ಶೋಭಾ ಆರ್ ಸ್ವಾಗತಿಸಿ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರು. ಸಮಾಜಶಾಸ್ತ್ರ ವಿಭಾಗ ಮುಖ್ಯಸ್ಥರಾದ ಅಮೃತಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

RELATED ARTICLES
- Advertisment -
Google search engine

Most Popular