ವಿಟ್ಲ: ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡಿಬಾಗಿಲು ಇಲ್ಲಿ ಶಿಕ್ಷಣ ಇಲಾಖೆಯಿಂದ ಅಧಿಕೃತವಾಗಿ ಮಂಜೂರಾದ ನೂತನ ಆಂಗ್ಲಮಾಧ್ಯಮ ವಿಭಾಗದ ತರಗತಿಯನ್ನು ಉದ್ಘಾಟಿಸಲಾಯಿತು.
ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಘವ ಮಣಿಯಾಣಿ ಆಂಗ್ಲ ಮಾಧ್ಯಮ ತರಗತಿಯನ್ನು ಉದ್ಘಾಟಿಸಿದರು ಮತ್ತು ಸಮಾರಂಭದ ಅಧ್ಯಕ್ಷತೆ ಯನ್ನು ವಹಿಸಿದ್ದರು.
ಈ ಸಂದರ್ಭದಲ್ಲಿ ವಿದ್ಯಾಸಿರಿ ಟ್ರಸ್ಟಿನ ಅಧ್ಯಕ್ಷರಾದ ಲಯನ್ ಪ್ರಭಾಕರ್ ಶೆಟ್ಟಿ ದಂಬೆಕಾನ ಇವರು ಎಲ್ ಕೆ ಜಿ , ಯು ಕೆ ಜಿ ಮಕ್ಕಳಿಗೆ ಉಚಿತವಾಗಿ ಸಮವಸ್ತ್ರ ಕೊಡುಗೆಯಾಗಿ ನೀಡಿದರು. ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ವಿಟ್ಲ ಇದರ ಅಧ್ಯಕ್ಷರಾದ ಸಂಜೀವ ಪೂಜಾರಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರಾಘವ ಮೈರಾ, ಕೇಪು ಗ್ರಾಮ ಪಂಚಾಯತ್ ಸದಸ್ಯರಾದ ಜಗಜೀವನ್ ರಾಮ್ ಶೆಟ್ಟಿ, ಪುರುಷೋ ತ್ತಮ ಕಲ್ಲಂಗಳ, ವಿದ್ಯಾಸಿರಿ ಟ್ರಸ್ಟಿನ ಗೌರವಾ ಧ್ಯಕ್ಷರಾದ ಲಿಂಗಪ್ಪ ಗೌಡ, ಕಾರ್ಯ ದರ್ಶಿ ಜಿನಚಂದ್ರ ಜೈನ್, ಸದಸ್ಯರಾದ ಸೀತಾರಾಮ್ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಸವಿತಾ ಶೆಟ್ಟಿ, ಉದಯಗಿರಿ ಕುದ್ದು ಪದವು ಕ್ಲಸ್ಟರ್ ನ ಸಂಪನ್ಮೂಲ ವ್ಯಕ್ತಿ ರವಿಪ್ರಸಾದ್, ಮಾಜಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ನರಸಿಂಹ ಬಲ್ಲಾಲ್, ಎಸ್ ಡಿ ಎಂ ಸಿ ಸದಸ್ಯರು, ಪೋಷಕರು, ಶಿಕ್ಷಕ ವೃಂದ ಮತ್ತು ಮಕ್ಕಳು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಸುಜಾತ ಕೆ ರೈ ಸ್ವಾಗತಿಸಿ, ಗೌರವ ಶಿಕ್ಷಕಿ ಕುಮಾರಿ , ನಿವೇದಿತ ವಂದಿಸಿ,ಸಹ ಶಿಕ್ಷಕಿ ಲಲಿತಾ ನಿರೂಪಿಸಿದರು.