ಸ.ಹಿ.ಪ್ರಾ. ಶಾಲೆ ಪಾಡ್ಯಾರು; 79ನೇ ಸ್ವಾತಂತ್ರ್ಯೋತ್ಸವ

0
82

ಮೂಡುಬಿದಿರೆ : ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಡ್ಯಾರು ಇಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಗಿದ್ದು, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಮೇಶ್ ಆಚಾರ್ಯ ಅವರು ಧ್ವಜಾರೋಹಣ ನೆರವೇರಿಸಿದರು. ವಿಶ್ವ ವಿದ್ಯಾಲಯ ಘಟಕ ಕಾಲೇಜಿ ನ ದೈಹಿಕ ಶಿಕ್ಷಣ ನಿರ್ದೇಶಕರಾದ ರಾಧಾಕೃಷ್ಣ ಪುತ್ತೂರಾಯ ಸ್ವಾತಂತ್ರ್ಯ ದಿನದ ಸಂದೇಶ ನೀಡಿದರು. ಶಾಲಾ ಮುಖ್ಯ ಶಿಕ್ಷಕ ಪ್ರಸನ್ನ ಶೆಣೈ ಸ್ವಾಗತಿಸಿ, ಕಾಲೇಜಿನ ಪ್ರಾಧ್ಯಾಪಕಿ ಆಶಾ ವಂದಿಸಿದರು. ಅಂಗನವಾಡಿ ಶಿಕ್ಷಕಿ ಕುಮಾರಿ ಚೈತನ್ಯ ಮತ್ತು ಸಿಬ್ಬಂದಿ. ಶಾಲಾ ಸಿಬ್ಬಂದಿ ವರ್ಗ ಮತ್ತು ಕಾಲೇಜಿನ ಪ್ರಾಧ್ಯಾಪಕರು ಮತ್ತು ಸಿಬ್ಬಂದಿ ವರ್ಗ ಪೋಷಕ ವರ್ಗದವರು ಹಾಜರಿದ್ದರು.

LEAVE A REPLY

Please enter your comment!
Please enter your name here