Monday, July 15, 2024
Homeರಾಜ್ಯಎಸ್.ಪಿ.ಎ. ಪ್ರತಿಷ್ಠಾನದಿಂದ ಸಾಲಿಗ್ರಾಮ ಗಣೇಶ್‌ ಶೆಣೈಯವರಿಗೆ ಸನ್ಮಾನ

ಎಸ್.ಪಿ.ಎ. ಪ್ರತಿಷ್ಠಾನದಿಂದ ಸಾಲಿಗ್ರಾಮ ಗಣೇಶ್‌ ಶೆಣೈಯವರಿಗೆ ಸನ್ಮಾನ

ದಾವಣಗೆರೆ : ದಾವಣಗೆರೆಯ ಪ್ರೇಮಾ ಅರುಣಾಚಲ ಎನ್. ರೇವಣಕರ್ ಪ್ರತಿಷ್ಠಾನದ ಆಶ್ರಯದಲ್ಲಿ ಇತ್ತೀಚಿಗೆ ನಗರದ ಗೌರಮ್ಮ ನರಹರಿಶೇಟ್ ಸಭಾ ಭವನದಲ್ಲಿ 2023-24ನೇ ಸಾಲಿನ ಸಾರ್ವಜನಿಕ ಶಿಕ್ಷಣ ಇಲಾಖೆಯ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ದೈವಜ್ಞ ಬ್ರಾಹ್ಮಣ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ವೈಭವಪೂರ್ಣವಾಗಿ, ವಿಜೃಂಭಣೆಯ “ಶಾರದಾ ಪುರಸ್ಕಾರ” ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಶಿಸ್ತುಬದ್ದವಾಗಿಅಚ್ಚುಕಟ್ಟಾಗಿ ವ್ಯವಸ್ಥಿತವಾಗಿ ನಡೆಸಿಕೊಟ್ಟ ಪ್ರತಿಷ್ಠಾನದ ಗೌರವ ಸಲಹೆಗಾರರು, ಕಲಾಕುಂಚ, ಯಕ್ಷರಂಗ, ಸಿನಿಮಾಸಿರಿ, ಸರಸ್ವತಿ ದಾಸಮ್ಮ ಶೆಣೈ ಪ್ರತಿಷ್ಠಾನಗಳ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್‌ ಶೆಣೈಯವರಿಗೆ ಸನ್ಮಾನಿಸಿ, ಗೌರವಿಸಲಾಯಿತು ಎಂದು ಪ್ರತಿಷ್ಠಾನದ ನಿರ್ದೇಶಕರಾದ ನಲ್ಲೂರು ಲಕ್ಷ್ಮಣ್‌ರಾವ್ ತಿಳಿಸಿದ್ದಾರೆ.

ನಾಡಿನ ಖ್ಯಾತ ಹಿರಿಯ ಕವಿ, ಸಾಹಿತಿ ಬೆಂಗಳೂರಿನ ಬಿ. ಆರ್. ಲಕ್ಷ್ಮಣ್‌ರಾವ್, ಹೆಚ್. ಡುಂಡಿರಾಜ್, ಪ್ರತಿಷ್ಠಾನದ ಸಂಸ್ಥಾಪಕರಾದ ಡಾ. ನಲ್ಲೂರು ಅರುಣಾಚಲ ಎನ್. ರೇವಣಕರ್ ಮುಂತಾದವರು ಉಪಸ್ಥಿತರಿದ್ದರು. ಕಲಾಕುಂಚ ಸೇರಿದಂತೆ ವಿವಿಧ ಸಂಘಟನೆಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ಸರ್ವ ಸದಸ್ಯರು ಶೆಣೈಯರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

RELATED ARTICLES
- Advertisment -
Google search engine

Most Popular