ಬೈಂದೂರು:ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷರು, ದ.ಕ ಹಾಲು ಒಕ್ಕೂಟ ಮಂಗಳೂರು ಇದರ ನಿರ್ದೇಶಕರು ಆಗಿರುವ ಎಸ್,.ಪ್ರಕಾಶ್ಚಂದ್ರ ಶೆಟ್ಟಿಯವರಿಗೆ ಸಹಕಾರಿ ಕ್ಷೇತ್ರದಲ್ಲಿ ಗಮನಾರ್ಹ ಸೇವೆ ಸಲ್ಲಿಸಿದವರಿಗೆ ರಾಜ್ಯ ಮಟ್ಟದಲ್ಲಿ ನೀಡಲಾಗುವ ಕರ್ನಾಟಕ ಸರಕಾರದ ಪ್ರತಿಷ್ಠಿತ ಸಹಕಾರಿ ರತ್ನ ಪ್ರಶಸ್ತಿ ಲಭಿಸಿದೆ.
ನವಂಬರ್ 17 ರಂದು ಬಾಗಲಕೋಟೆಯಲ್ಲಿ ಜರುಗಲಿರುವ 71ನೇ ಅಖಿಲ ಭಾರತ ಸಹಕಾರಿ ಸಪ್ತಾಹದಲ್ಲಿ ರಾಜ್ಯದ ಮುಖ್ಯಮ೦ತ್ರಿ ಸಿದ್ಧರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಎಸ್.ಪ್ರಕಾಶ್ಚಂದ್ರ ಶೆಟ್ಟಿಯವರು ಕಳೆದ ೩೫ ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ. ಪ್ರಗತಿಪರ ಕೃಷಿಕರಾಗಿ, ಮಾದರಿ ಹೈನುಗಾರರಾಗಿ ರಾಜ್ಯದಲ್ಲಿ ಗಮನ ಸಳೆದ ಸಾಧನೆ ಮಾಡಿರುವ ಸಹಕಾರಿ ಕ್ಷೇತ್ರದಲ್ಲಿ ಅಗ್ರಮಾನ್ಯ ಸಾಧನೆ ಮಾಡಿದ್ದಾರೆ. ಖಂಬದಕೋಣೆ ರೈತರ ಸೇವ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಂಘವನ್ನು ಉತ್ತುಂಗಕ್ಕೇರಿಸಿದ್ದಾರೆ. ಮೆಕೋಡು ಹಾಲುಉತ್ಪಾದಕರ ಸಂಘದ ಅಧ್ಯಕ್ಷರಾಗಿ ಸ್ವಂತ ಕಟ್ಟಡ ನಿರ್ಮಾಣ, ಹಾಲು ಶೀತಲಿಕರಣ ಘಟಕ ಸ್ಥಾಪನೆಯಲ್ಲಿ ಮು೦ಚೂಣಿ ವಹಿಸಿದ್ದಾರೆ.