Monday, February 10, 2025
Homeಉಡುಪಿಎಸ್. ಎಸ್. ಎಲ್. ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಡುಪಿ ರಾಜ್ಯಕ್ಕೆ ಪ್ರಥಮ ಸ್ಥಾನದ...

ಎಸ್. ಎಸ್. ಎಲ್. ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಡುಪಿ ರಾಜ್ಯಕ್ಕೆ ಪ್ರಥಮ ಸ್ಥಾನದ ಸಂಕಲ್ಪ ಮಾಡೋಣ : ಯಶ್ ಪಾಲ್ ಸುವರ್ಣ

ಉಡುಪಿ ವಿಧಾನಸಭಾ ಕ್ಷೇತ್ರದ ಎಲ್ಲಾ ಪ್ರೌಢ ಶಾಲಾ ಮುಖ್ಯ ಶಿಕ್ಷಕರುಗಳು ಹಾಗೂ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳಿಗೆ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ಅಂತಿಮ ಪರೀಕ್ಷೆಯ ಬಗ್ಗೆ ಆಯೋಜಿಸಿದ್ದ ಪೂರ್ವಸಿದ್ದತಾ ಸಭೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಮಹತ್ತರ ಘಟ್ಟವಾದ ಎಸ್. ಎಸ್. ಎಲ್. ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೆ ಶಿಕ್ಷಕರು ವಿಶೇಷ ಮುತುವರ್ಜಿ ವಹಿಸಿ, ಮತ್ತೊಮ್ಮೆ ಉಡುಪಿ ಜಿಲ್ಲೆ ಮುಂಬರುವ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿ ಮೂಡಿಬರಲು ಎಲ್ಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸಂಕಲ್ಪ ಮಾಡುವಂತೆ ಕರೆ ನೀಡಿದರು.

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಗಣಪತಿ ಶಿಕ್ಷಣ ಹಾಗೂ ಆರೋಗ್ಯ ವಿಚಾರಕ್ಕೆ ವಿಶೇಷ ಆದ್ಯತೆ ನೀಡುತ್ತಾ ಬಂದಿರುವ ಶಾಸಕ ಯಶ್ ಪಾಲ್ ಸುವರ್ಣ ರವರು ನಿರಂತರವಾಗಿ ವಿದ್ಯಾರ್ಥಿಗಳಿಗೆ ಗುಣ ಮಟ್ಟದ ಶಿಕ್ಷಣ ವ್ಯವಸ್ಥೆಗೆ ಸಹಕಾರ ನೀಡುತ್ತಿದ್ದು, ಮತ್ತೂಮ್ಮೆ ಉತ್ತಮ ಫಲಿತಾಂಶಕ್ಕಾಗಿ ಜಿಲ್ಲೆಯ ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು ಕೈಜೋಡಿಸಲಿದ್ದಾರೆ ಎಂದರು.

ಸಂಪನ್ಮೂಲ ವ್ಯಕ್ತಿ ಪೂರ್ಣಪ್ರಜ್ಞಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಸುಕನ್ಯ ಮೇರಿ ಯವರು ದೇಶದ ಭವಿಷ್ಯ ರೂಪಿಸಲಿರುವ ವಿದ್ಯಾರ್ಥಿಗಳ ಜೀವನ ರೂಪಿಸುವ ಮಹತ್ವದ ಹೊಣೆ ಶಿಕ್ಷಕರದ್ದಾಗಿದ್ದು, ಕರಾವಳಿ ಜಿಲ್ಲೆಯ ಶಿಕ್ಷಕರ ಬದ್ಧತೆ ಪ್ರಾಮಾಣಿಕ ಸೇವೆಯಿಂದ ಜಿಲ್ಲೆಯ ಶೈಕ್ಷಣಿಕ ಸಾಧನೆ ಇತರರಿಗೆ ಮಾದರಿಯಾಗಿದೆ ಎಂದರು.

ಸಭೆಯಲ್ಲಿ ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಜಗದೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಯಲ್ಲಮ್ಮ, ಶ್ರೀಮತಿ ಶಬಾನಾ, ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಇಂದಿರಾ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಶ್ರೀಮತಿ ನವ್ಯ ನಾಯಕ್, ನಿವೃತ್ತ ಪ್ರಾಂಶುಪಾಲರಾದ ಶ್ರೀಮತಿ ತಾರಾ ದೇವಿ ಉಪಸ್ಥಿತರಿದ್ದರು. ಕಾಲೇಜಿನ ಉಪನ್ಯಾಸಕರಾದ ಶ್ರೀ ಗಂಗಾಧರ ವಿ. ಎ. ಕಾರ್ಯಕ್ರಮ ನಿರೂಪಿಸಿದರು.

RELATED ARTICLES
- Advertisment -
Google search engine

Most Popular