Saturday, June 14, 2025
Homeಪುತ್ತೂರುಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಸದಾನಂದ ಶೆಟ್ಟಿ ಕೂರೇಲು

ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಸದಾನಂದ ಶೆಟ್ಟಿ ಕೂರೇಲು

ಪುತ್ತೂರು: ಕಾರ್ಪಾಡಿ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯ ಮುಂದಿನ ಮೂರು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಕೂರೇಲು ಸದಾನಂದ ಶೆಟ್ಟಿ ಬೈಲುಗುತ್ತು ಅವರು ನಾಲ್ಕನೇ ಬಾರಿಗೆ ಆಯ್ಕೆಯಾಗಿದ್ದಾರೆ. ದೇವಸ್ಥಾನದಲ್ಲಿ ಮೇ.9ರಂದು ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಶಿವನಾಥ ರೈ ಮೇಗಿನಗುತ್ತು ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸದಾನಂದ ಶೆಟ್ಟಿಯವರನ್ನು ನೂತನ ಅಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಆಡಳಿತಾಧಿಕಾರಿ ಗೋಪಾಲರವರು ಆಯ್ಕೆ ಪ್ರಕ್ರಿಯೆ ನಡೆಸಿದರು.

ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಚೆನ್ನಪ್ಪ ಮರಿಕೆ, ಪೂರ್ಣಿಮಾ ರೈ, ಪವಿತ್ರ ರೈ, ಉಷಾ ಎಸ್. ಆಳ್ವ, ಯಾದವಕೃಷ್ಣ ಗೌಡ, ಹರಿಶ್ಚಂದ್ರ, ಪ್ರಜ್ವಲ್ ರೈ ತೊಟ್ಟ, ಅರ್ಚಕ ಸೂರ್ಯನಾರಾಯಣ ಭಟ್ ಉಪಸ್ಥಿತರಿದ್ದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಪ್ರಸಾದ್ ಆಳ್ವ, ಉಲ್ಲಾಸ್ ಕೋಟ್ಯಾನ್, ಆರ್ಯಾಪು ವಲಯ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ರೈ ಮೂಲೆ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಗಿರೀಶ್ ಕಿನ್ನಿಜಾಲು ಸೇರಿದಂತೆ ಹಲವು ಮಂದಿ ಅಗಮಿಸಿ, ನೂತನ ಅಧ್ಯಕ್ಷರನ್ನು ಅಭಿನಂದಿಸಿದರು. ಕಳೆದ ಹಲವು ವರ್ಷಗಳಿಂದ ದೇವಸ್ಥಾನದ ಎಲ್ಲಾ ಕಾರ್ಯಗಳಲ್ಲಿ ಸಕ್ರಿಯರಾಗಿರುವ ಸದಾನಂದ ಶೆಟ್ಟಿಯವರು ಆಡಳಿತ ಮಂಡಳಿಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದರು. ಅಲ್ಲದೆ ಈ ಹಿಂದೆ ಮೂರು ಅವಧಿಯಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ದೇವಸ್ಥಾನದ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದ್ದರು. ಕಳೆದ ಬ್ರಹ್ಮಕಲಶೋತ್ಸವ ಸಮಿತಿಯ ಉಪಾಧ್ಯಕ್ಷರೂ ಆಗಿದ್ದ ಇವರು ಆರ್ಯಾಪು ಗ್ರಾ.ಪಂ ಮಾಜಿ ಅಧ್ಯಕ್ಷರಾಗಿದ್ದು ಪ್ರಸ್ತುತ ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿರುತ್ತಾರೆ.

RELATED ARTICLES
- Advertisment -
Google search engine

Most Popular