ಸಿದ್ದಕಟ್ಟೆಯ ಶ್ರೀ ಚಂದ್ರನಾಥ ಇಂದ್ರರು ನಿಧನರಾದ ಸುದ್ದಿ ತಿಳಿದು ವಿಷಾದವಾಯಿತು: ಡಿ. ವೀರೇಂದ್ರ ಹೆಗ್ಗಡೆಯವರು

0
110

ಜೈನಧರ್ಮದ ಪೂಜೆಗಳು, ವಿಶೇಷ ಆರಾಧನೆಗಳು, ಪಂಚಕಲ್ಯಾಣ, ಪ್ರತಿಷ್ಠಾಮಹೋತ್ಸವ  ಮೊದಲಾದ ಧಾರ್ಮಿಕ ವಿಧಿ-ವಿಧಾನಗಳ ಬಗ್ಗೆ ಅಪಾರ ಅನುಭವ ಹೊಂದಿದ್ದ ಅವರು ಧರ್ಮಸ್ಥಳದಲ್ಲಿ ನಡೆದ ಭಗವಾನ್ ಬಾಹುಬಲಿ ಪ್ರತಿಷ್ಠಾಪನೆ, ಮಹಾಮಸ್ತಕಾಭಿಷೇಕ, ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣ, ಪ್ರತಿಷ್ಠಾಮಹೋತ್ಸವ ಮೊದಲಾದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಹಕರಿಸಿದ್ದಾರೆ.
ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ. ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಹಾಗೂ ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ.

LEAVE A REPLY

Please enter your comment!
Please enter your name here