ಮಂಗಳೂರು: ಬೆಳ್ತಂಗಡಿ ತಾಲೂಕಿನ ಗುಂಡೂರಿ ಹಾಲು ಉತ್ಪಾದಕರ ಸಹಕಾರ ಸಂಘವು 2024-25ನೇ ಸಾಲಿನ ಸಾಧನಾ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ನಿಂದ ಈ ಪ್ರಶಸ್ತಿ ಲಭಿಸಿದ್ದು, ಸದ್ರಿ ಸಾಲಿನಲ್ಲಿ ಸಂಘದ ಹಾಲು ಖರೀದಿ ಮತ್ತು ಮಾರಾಟದ ಗಣನೀಯ ಯಶಸ್ಸನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಸಂಘದ ಅಧ್ಯಕ್ಷರಾದ ಪಿ. ರಮೇಶ್ ಪೂಜಾರಿ ಪಡ್ಡಾಯಿಮಜಲು ಹಾಗೂ ಕಾರ್ಯನಿರ್ವಹಣಾಧಿಕಾರಿ ರಾಜು ಪೂಜಾರಿ ಪ್ರಶಸ್ತಿ ಸ್ವೀಕರಿಸಿದರು.